ಮಂಗಳೂರು: ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಸ್ಫರ್ಧೆ ಆಕೃತಿ -2020 ಉದ್ಘಾಟನಾ ಸಮಾರಂಭದಲ್ಲಿ ಅಶಕ್ತರ ಪಾಲಿಗೆ ಆನ್ಲೈನ್ ಫಂಡ್ ರೈಸಿಂಗ್ ಮೂಲಕ ಗಮನ ಸೆಳೆದಿರುವ ಸಾಧಕ, ಕಾಲೇಜಿನ ಹಳೆ ವಿದ್ಯಾರ್ಥಿ ಅರ್ಜುನ್ ಭಂಡಾರ್ಕರ್ ಅವರನ್ನು ಕಾಲೇಜಿನ ಸಂಚಾಲಕ ಎಂ.ಪದ್ಮನಾಭ ಪೈ ಗೌರವಿಸಿದರು.
ಬೆಂಗಳೂರಿನ ಏಸ್ ಗ್ರೂಫ್ ಆಫ್ ಇಂಡಸ್ಟ್ರೀಸ್ನ ಅಟೋ ಸಿಎನ್ಸಿ ಸಿಇಒ ಎಂ. ವಿನಾಯಕ ಡಿ. ಕಾಮತ್, ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಉಪಾಧ್ಯಕ್ಷ ಎಂ.ಅಣ್ಣಪ್ಪ ಪೈ, ಕಾರ್ಯದರ್ಶಿ ಎಂ. ರಂಗನಾಥ ಭಟ್, ಸಹಿತ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲ ಡಾ. ಗಣೇಶ್ ವಿ.ಭಟ್ ಮತ್ತಿತರರು ಉಪಸ್ಥಿತರಿದ್ದರು.

Comments are closed.