ಮಂಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಮಂಗಳೂರು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದಿ ಯೋಜನೆ ಗ್ರಾಮಾಂತರ, ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿ ಮಠ, ಮಂಗಳೂರು ಇವರುಗಳ ಜಂಟೀ ಆಶ್ರಯದಲ್ಲಿ ಜನ ಸಾಮಾನ್ಯರಿಗಾಗಿ ಕಾನೂನು ಅರಿವು ಕಾರ್ಯಕ್ರಮ ಪ್ರಾಥಮಿಕ ಆರೋಗ್ಯ ಕೇಂದ್ರ, ಗಂಜಿಮಠದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ ಎ.ಜಿ. ಉದ್ಘಾಟಿಸಿ ಮಾತನಾಡಿದರು.
ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸಂಘಟಿತರಾಗಿ ಮಹಿಳೆಯರ ಹಾಗೂ ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕಾನೂನು ಅರಿವು ನೀಡುವುದಲ್ಲದೆ ಸರ್ಕಾರದಿಂದ ದೊರೆಯುವ ವಿವಿಧ ಸೌಲತ್ತುಗಳ ಬಗ್ಗೆ ಅವರಿಗೆ ಅರಿವನ್ನುಂಟು ಮಾಡಬೇಕೆಂದು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಉಪಾಧ್ಯಾಕ್ಷ ಜಿನೇಂದ್ರ ಕುಮಾರ್ ಬಿ ವಹಿಸಿದ್ದು, ಮಂಗಳೂರು ವಕೀಲರ ಸಂಘದ ಕಾರ್ಯದರ್ಶಿ ರಾಘವೇಂದ್ರ ಹೆಚ್.ವಿ ಗಂಜಿ ಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಸೀತಮ್ಮ ಹಾಗೂ ವಕೀಲರಾದ ಪ್ರವೀಣ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಸಂಪನ್ಮೂಲ ವ್ಯಕ್ತಿ ಆಶಾರಾಣಿ ಮಾಡಾ ವಕೀಲರು ಮಂಗಳೂರು ಇವರು ಮಹಿಳೆಯರಿಗೆ ಸಂಬಂಧಿಸಿದ ಆಸ್ತಿ ಹಕ್ಕು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಇತರ ಕಾಯ್ದೆಗಳ ಬಗ್ಗೆ ಉಪನ್ಯಾಸ ನೀಡಿದರು.

Comments are closed.