ಮಂಗಳೂರು, ಮಾರ್ಚ್.11; ಭಾರತದ ಸ್ವಾತಂತ್ರ್ಯ ಹೋರಾಟದ ಭಾಗವಾಗಿ ನಡೆದ ‘ದಂಡಿ ಸತ್ಯಾಗ್ರಹ’ದ 90ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮಾ. 12 ಸರಕಾರವು ಜಾರಿಗೆ ತರಲಿರುವ ಎನ್ಪಿಆರ್ ಕೈಬಿಡುವಂತೆ ಒತ್ತಾಯಿಸಿ, Career Guidance & Information Centre ವತಿಯಿಂದ ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹವನ್ನು ‘ನಾವು ಭಾರತೀಯರು’ (We the People of India) ರಾಜ್ಯ ಸಮಿತಿ ಹಮ್ಮಿಕೊಂಡಿದೆ ಎಂದು Career Guidance & Information Centre ಅಧ್ಯಕ್ಷ ಉಮರ್ ಯು. ಹೆಚ್ ತಿಳಿಸಿದ್ದಾರೆ.
ಈ ರಾಜ್ಯವಾಪಿ ಚಳುವಳಿಯ ಭಾಗವಾಗಿ ನಗರದ ಮಿನಿ ವಿಧಾನ ಸೌಧದ ಮುಂಭಾಗ (ಕ್ಲಾಕ್ ಟವರ್ ಬಳಿ) ನಾಳೆ ಬೆಳಿಗ್ಗೆ 10.00ರಿಂದ ಸಂಜೆ 5.00ರ ತನಕ ಸಾಮೂಹಿಕ ಉಪವಾಸ ಸತ್ಯಾಗ್ರಹ ಆಯೋಜಿಸಲಾಗಿದೆ. ಸಂಜೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದು ‘ನಾವು ಭಾರತೀಯರು’ ದ.ಕ. ಜಿಲ್ಲಾ ಪ್ರತಿನಿಧಿ ಉಮರ್ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.