ಆರೋಗ್ಯ

ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಶಂಕೆ: ಮಣಿಪಾಲ ಕೆಎಂಸಿಗೆ ದಾಖಲು

Pinterest LinkedIn Tumblr

ಉಡುಪಿ: ವಿದೇಶದಿಂದ ಬಂದ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳಿಗೆ ಶಂಕಿತ ಕೊರೋನಾ ಹರಡಿರುವ ಶಂಕೆಯಿದ್ದು ವಿದ್ಯಾರ್ಥಿಗಳು ಇತ್ತೀಚೆಗೆ ಅಮೇರಿಕಾ ಮತ್ತು ಕುವೈಟ್ ನಿಂದ ಬಂದಿದ್ದಾರೆ ಎನ್ನಲಾಗಿದೆ.

ಇಬ್ಬರಿಗೂ ಕೊರೋನಾದ ಲಕ್ಷಣ ಕಂಡು ಬಂದ ಹಿನ್ನೆಲೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ವ್ಯವಸ್ಥೆ ನೀಡಲಾಗುತ್ತಿದೆ ಎಂದು ಉಡುಪಿ ಡಿ.ಎಚ್.ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.

Comments are closed.