
ಬೆಳಗಾವಿ: ಕೇರಳ ರಾಜ್ಯದ ಪ್ರವಾಸದಿಂದ ತಾಲ್ಲೂಕಿನ ತನ್ನ ಗ್ರಾಮಕ್ಕೆ ವಾಪಸಾದ ಬಳಿಕ ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ವೃದ್ಧರೊಬ್ಬರನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ಪ್ರತ್ಯೇಕ ವಾರ್ಡ್‌ಗೆ ದಾಖಲಿಸಲಾಗಿದೆ.
ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕೆತ್ಸೆ ಪಡೆಯಲು ಬಂದಿದ್ದ ಅವರನ್ನು, ಅಲ್ಲಿನ ವೈದ್ಯರು ಜಿಲ್ಲಾಸ್ಪತ್ರೆಯ ವಿಶೇಷ ಘಟಕಕ್ಕೆ ಕಳುಹಿಸಿದ್ದಾರೆ. 60 ವರ್ಷ ವಯಸ್ಸಿನ ಅವರ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗುವುದು ಎಂದು ತಿಳಿದುಬಂದಿದೆ.
‘ಅವರಿಗೆ ಅಸ್ತಮಾ ಮೊದಲಾದ ಬೇರೆ ರೀತಿಯ ಕಾಯಿಲೆಗಳೂ ಇವೆ. ಅವುಗಳಿಗೆ ಚಿಕಿತ್ಸೆ ನೀಡಿದ ಬಳಿಕ, ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಸೋಂಕು ಶಂಕೆ ನಿವಾರಣೆಗಾಗಿ, ಅವರ ಮೇಲೆ ನಿಗಾ ವಹಿಸಲಾಗಿದೆ ಎಂದು ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ತಿಳಿಸಿದರು.
Comments are closed.