ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದಅತ್ಯುತ್ತಮ ಕ್ರೀಡಾ ವರದಿಗೆ ಕ್ರೀಡಾ ಅಂಕಣಕಾರ ಎಸ್ .ಜಗದೀಶ್ಚಂದ್ರ ಅಂಚನ್ ಗೆ ಕೆ.ಎ. ನೆಟ್ಟಕಲಪ್ಪ ರಾಜ್ಯ ಪ್ರಶಸ್ತಿ ಪ್ರದಾನ
ಮಂಗಳೂರು : ಕ್ರೀಡಾ ಅಂಕಣಕಾರ ಶ್ರೀ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಇವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡುವ ಪ್ರತಿಷ್ಠಿತ ‘ ಕೆ.ಎ.ನೆಟ್ಟಕಲಪ್ಪ ರಾಜ್ಯ ಪ್ರಶಸ್ತಿಯನ್ನು ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಇವರು ಇತ್ತೀಚಿಗೆ ಮಂಗಳೂರಿನಲ್ಲಿ ಪ್ರದಾನ ಮಾಡಿದರು.
ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ರಾಜ್ಯ ಪ್ರಶಸ್ತಿಯನ್ನು ಜಗದೀಶ್ಚಂದ್ರ ಅಂಚನ್ ರಾಜ್ಯದ ಉಪಮುಖ್ಯಮಂತ್ರಿಗಳಿಂದ ಪಡೆದುಕೊಂಡರು. ಸುಮಾರು 30 ವರ್ಷಗಳಿಂದ ಕ್ರೀಡಾ ಲೇಖನಗಳ ಮೂಲಕ ರಾಜ್ಯ , ಅಂತರ್ ರಾಜ್ಯ ಮಟ್ಟದ ದಿನ ಪತ್ರಿಕೆಗಳಲ್ಲಿ ಹಾಗೂ ವಾರಪತ್ರಿಕೆಗಳಲ್ಲಿ ಇವರು ಗುರುತಿಸಿಕೊಂಡಿದ್ದಾರೆ . ಇವರು ಬರೆದ ಸುಮಾರು ನಾಲ್ಕು ಸಾವಿರಕ್ಕೂ ಮಿಕ್ಕಿದ ಕ್ರೀಡಾ ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ .
ಕ್ರೀಡಾ ಬರವಣಿಗೆಗಾಗಿ ಇವರಿಗೆ 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , 2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ; ಜಾನಪದ ಕ್ರೀಡೆಗಳ ಬಗ್ಗೆ ಇವರು ಬರೆದ ಕ್ರೀಡಾ ಲೇಖನಗಳಿಗಾಗಿ 2019ರ ಜಾನಪದ ಲೋಕ ರಾಜ್ಯ ಪ್ರಶಸ್ತಿ ; ನಮ್ಮ ಕುಡ್ಲ ಸಾಧಕ ಪ್ರಶಸ್ತಿ , ಸಮಾಜ ರತ್ನ ರಾಜ್ಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಹಾಗೂ ಸನ್ಮಾನ ಪುರಸ್ಕಾರವನ್ನು ಇವರು ಪಡೆದಿದ್ದಾರೆ .
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು , ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವರಾದರು ಶ್ರೀ ಬಿ.ರಮಾನಾಥ ರೈ , ಶ್ರೀ ಕೃಷ್ಣ ಜೆ ಪಾಲೇಮಾರ್ , ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಜೆ ಮೊದಲಾದವರು ಉಪಸ್ಥಿತರಿದ್ದರು.

Comments are closed.