ಕರಾವಳಿ

ಕಾಲೇಜು ಅಭಿವೃಧ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಮಹತ್ತರ: ಶಾಸಕ ಕಾಮಾತ್

Pinterest LinkedIn Tumblr

ಮಂಗಳೂರು ; ಮಂಗಳೂರು ರಥಬೀದಿ ಡಾ ಪಿ. ದಯಾನಂದ ಪೈ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವದ ಉದ್ಫಾಟನೆ ಹಾಗೂ ತೆಲಿಕೆ 2020 ಕಿರು ಹಾಸ್ಯ ಪ್ರಹಸನ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಶಾಸಕ ಹಾಗೂ ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ನೆರವೇರಿಸಿದರು.

ಕಾಲೇಜಿನ ವಿದ್ಯಾರ್ಥಿ ಶೈಕ್ಷಣಿಕ ಸಮಿತಿಯ ಬಗ್ಗೆ ಮೆಚ್ಚುಗೆ ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿದೆಸೆಯಲ್ಲಿ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿದಲ್ಲಿ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ. ವಿದ್ಯಾಭ್ಯಾಸ ಮುಗಿಸಿದ ನಂತರ ಸಮಾಜದಲ್ಲಿ ನೆಲೆ ಕಂಡುಕೊಂಡು ವಿದ್ಯೆ ನೀಡಿದ ಸಂಸ್ಥೆಯ ಸೇವೆಗೈಯಲು ಕರೆನೀಡಿದರು.

ಮುಖ್ಯ ಅತಿಥಿಗಳಾಗಿ ಅಗಮಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಪ್ರಾಂಶುಪಾಲ ಡಾ ವರದರಾಜ ಚಂದ್ರಗಿರಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಾಮಥ್ಯ ಹಾಗೂ ತಮ್ಮ ಜವಾಬ್ದಾರಿಯನ್ನು ಅರಿತು ಬರುವ ಅವಕಾಶಗಳನ್ನು ಉಪಯೋಗಿಸಿ ತಮ್ಮ ಅರಿವಿನ ದಿಗಂತವನ್ನು ವಿಸ್ತರಿಸುವ ಗುರಿಯನ್ನಿಟ್ಟುಕೊಂಡು ಶ್ರಧ್ದೆಯಿಂದ ಕಾರ್ಯನಿರ್ವಹಿಸಿದಲ್ಲಿ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯವೆಂದು ತಿಳಿಸಿದರು.

ಈ ಸಂದರ್ಭ ಕಾಲೇಜಿನ ಹಿರಿಯ ವಿದ್ಯಾರ್ಥಿ ತಂಡದ ಕಿರುಚಿತ್ರದ ಝಲಕ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ತುಳು ಚಲನಚಿತ್ರ ನಟ ತಿಮ್ಮಪ್ಪ ಕುಲಾಲ್, ನಿರೀಕ್ಷಾ ಶೆಟ್ಟಿ, ಝೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ಚಿತ್ರಾಲಿ, ಝೀ ಕನ್ನಡ ಕಾಮಿಡಿ ಕಿಲಾಡಿಯ ದಿವ್ಯಾ ಅಂಚನ್, ಖ್ಯಾತ ಯುವ ಗಾಯಕ ಅಫಾರ್ಝ ಉಳ್ಳಾಲ್, ಚಲನಚಿತ್ರ ನಟಿ ರೂಪಾ ವರ್ಕಾಡಿ, ಹಿರಿಯ ವಿದ್ಯಾರ್ಥಿ ಸಂಘದ ಸಂಯೋಜಕ ಡಾ. ಶೇಷಪ್ಪ ಅಮೀನ್, ಸಂಘದ ಅಧ್ಯಕ್ಷ ಗುರುಪ್ರಸಾದ್ ಉಪಸ್ಥಿತರಿದ್ದರು.

ಅತಿಥಿಗಳನ್ನು ಕಾಲೇಜಿನ ಪ್ರಾಂಶುಪಾಲ ರಾಜಶೇಖರ ಸಿ ಸ್ವಾಗತಿಸಿದರು. ಲಾವಣ್ಯ ಹಾಗೂ ಪ್ರಜ್ಞಾ ಕಾರ್ಯಕ್ರಮ ನಿರ್ವಹಿಸಿದರು.

Comments are closed.