
ಜಮ್ಮು-ಕಾಶ್ಮೀರ: ಇಂದು ಬೆಳಗ್ಗೆ ಅನಂತ್ ನಾಗ್ ಜಿಲ್ಲೆಯ ವಾತ್ರಿಗಾಮ ಗ್ರಾಮದಲ್ಲಿ ಭದ್ರತಾ ಪಡೆಗಳು ನಾಲ್ಕು ಉಗ್ರರನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಹತ್ಯೆಯಾದ ಉಗ್ರರಲ್ಲಿ ಒಬ್ಬನನ್ನು ತಾರಿಖ್ ಅಹಮ್ಮದ್ ಎಂದು ಗುರುತಿಸಲಾಗಿದ್ದು ಅನಂತ್ ನಾಗ್ ಜಿಲ್ಲೆಯ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ. ಉಳಿದ ಮೂವರು ಲಷ್ಕರ್ ಏ ತೊಯ್ಬಾ ಉಗ್ರ ಸಂಘಟನೆಯ ಸದಸ್ಯರಾಗಿದ್ದರು ಎಂದು ವರದಿಯಾಗಿದೆ.
ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಮೇರೆಗೆ ಕಾರ್ಯಚರಣೆಗಿಳಿದ ಭದ್ರತಾ ಪಡೆಗಳು ವಾತ್ರಿಗಾಮ ಗ್ರಾಮದಲ್ಲಿ ಪ್ರತಿಯೊಂದು ಮನೆಯನ್ನು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿದಾಳಿ ನಡೆಸಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಎನ್ ಕೌಂಟರ್ ಮಾಡಿದ್ದಾರೆ.
ಇದಕ್ಕೂ ಮೊದಲು ಗುಪ್ತಚರ ಇಲಾಖೆ 3ಕ್ಕಿಂತ ಹೆಚ್ಚು ಉಗ್ರರು ಗ್ರಾಮದೊಳಕ್ಕೆ ನುಸುಳಿದ್ದಾರೆ ಎಂಬ ಮಾಹಿತಿ ನೀಡಿದ್ದವು.
Comments are closed.