ಕರಾವಳಿ

ಕೊರೊನ ಮುನ್ನೆಚ್ಚರಿಕೆ ಕ್ರಮವಾಗಿ ವೆನ್ಲಾಕ್‌ನಲ್ಲಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ; ಡಾ.ರಾಜೇಶ್ವರಿದೇವಿ

Pinterest LinkedIn Tumblr

ಮಂಗಳೂರು ; ನಗರದ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಕೊರೊನ ಸೋಂಕು ಪೀಡಿತರಿಗಾಗಿಯೇ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಇವುಗಳಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಾರ್ಡ್ ಇರುತ್ತದೆ. ಈವರೆಗೆ 10 ಶಂಕಿತ ಪ್ರಕರಣಗಳು ಪತ್ತೆಯಾಗಿದೆ ಎಂದು ವೈದ್ಯಾಧಿಕಾರಿ ಡಾ.ರಾಜೇಶ್ವರಿದೇವಿ ಹೇಳಿದರು.

ಕೊರೋನ ವೈರಸ್ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆ ಹಾಗೂ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಹೆಲ್ಪ್‌ಡೆಸ್ಕ್ ತೆರೆಯಲಾಗಿದೆ. ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗ್ರಾಪಂ ಮಟ್ಟದಲ್ಲಿ ಮನೆಗಳಿಗೆ ತೆರಳಿ ಕರಪತ್ರ, ಬ್ಯಾನರ್, ಪೋಸ್ಟರ್, ರೇಡಿಯೋ, ದೂರದರ್ಶನ ಮಾಧ್ಯಮ ಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ ಎಂದರು.

ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಹೊರ ರಾಜ್ಯಗಳ ಪ್ರಯಾಣಿಕರ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಇಲ್ಲಿಯೂ ಹೆಲ್ಫ್‌ಡೆಸ್ಕ್ ತೆರೆಯಲಾಗಿದೆ. ಸೋಂಕಿನ ಕುರಿತಂತೆ ನೆರೆಯ ಕೇರಳ ರಾಜ್ಯ ಜೊತೆ ನಿರಂತರ ಸಂಪರ್ಕವಿರಿಸಿಕೊಳ್ಳಲಾಗಿದೆ. ಇದುವರೆಗೆ ಯಾವುದೇ ಪ್ರಕರಣ ಕಂಡುಬಂದಿಲ್ಲ ಎಂದು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನ್‌ಚಂದ್ರ ಕುಲಾಲ್ ತಿಳಿಸಿದರು.

Comments are closed.