ಸುರತ್ಕಲ್ : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಗದಿಯಾಗಿರುವ ಎಲ್ಲಾ ನಿಗದಿತ ಕಾರ್ಯಕ್ರಮವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ರದ್ದು ಪಡಿಸಿದ್ದಾರೆ.
ಕೊರೊನಾ ವೈರಸ್ ಹರಡದಂತೆ ಸರಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ದ.ಕ ಜಿಲ್ಲಾಡಳಿತವೂ ಸಮರ್ಪಕ ಕ್ರಮ ಕೈಗೊಳ್ಳುತ್ತಿದೆ.ಹೆಚ್ವಿನ ಸಂಖ್ಯೆಯಲ್ಲಿ ಜನ ಒಟ್ಟುಗೂಡುವುದರಿಂದ ಸೋಂಕು ಹರಡುವ ಸಾಧ್ಯತೆಯೂ ಇಲ್ಲದಿಲ್ಲ.ಹೀಗಾಗಿ ಸಾಮಾಜಿಕ ಸ್ವಾಸ್ಥ್ಯ ರಕ್ಷಣೆ ಹಿತದೃಷ್ಟಿಯಿಂದ ಒಂದು ವಾರಗಳ ಕಾಲ
ಶಾಸಕರ ಕಾರ್ಯಕ್ರಮ ರದ್ದು ಪಡಿಸಲಾಗಿದೆ.
ಮುಂದಿನ ಕಾರ್ಯಕ್ರಮಗಳ ,ಅಹವಾಲು ಸ್ವೀಕಾರ ಮತ್ತಿತರ ಕಾರ್ಯಕ್ರಮಗಳ ದಿನಾಂಕ ನಿಗದಿಪಡಿಸಲಾಗುವುದು.ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

Comments are closed.