
ನವದೆಹಲಿ: ಕೊರೊನಾ ವೈರಸ್ ಮಾಹಾಮಾರಿ ನಿನ್ನೆ ಭಾರತದಲ್ಲಿ ಮೂರನೇ ಬಲಿ ಪಡೆದುಕೊಂಡಿದೆ. ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಹಿಮಾಚಲ ಪ್ರದೇಶದ 69 ವರ್ಷದ ವೃದ್ಧ ಸಾವನ್ನಪ್ಪಿದ ವ್ಯಕ್ತಿ. ಮಾರ್ಚ್ 15ರಂದು ಯುಎಸ್ ನಿಂದ ಹಿಂದಿರುಗಿದ್ದ ವೃದ್ಧನನ್ನು ಟಂಡಾ ಆಸ್ಪತ್ರಯಲ್ಲಿ ಚಿಕಿತ್ಸೆ ನೀಡಲಾಗುತ್ತಿತು. ನಿನ್ನೆ ಮಧ್ಯಾಹ್ನ ಪಶ್ಚಿಮ ಬಂಗಾಳದಲ್ಲಿ ಇಟಲಿ ಪ್ರವಾಸದಿಂದ ಬಂದಿದ್ದ ವ್ಯಕ್ತಿ ಮತ್ತು ಮಹಾರಾಷ್ಟ್ರದಲ್ಲಿ ಓರ್ವ ಸಾವನ್ನಪ್ಪಿದ್ದರು. ನೆರೆಯ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆಯಾಗಿದೆ. ಇನ್ನು ಕರ್ನಾಟಕದಲ್ಲಿ ಏಳು ಸೋಂಕಿತರು ಪತ್ತೆಯಾಗಿದ್ದು, ಆತಂಕಕ್ಕೊಳಗಾದ ಜನರು ಬೆಂಗಳೂರು ತೊರೆಯುತ್ತಿದ್ದಾರೆ.
ಜಗತ್ತಿನಾದ್ಯಂತ ಲಂಗುಲಗಾಮಿಲ್ಲದೇ ರೌದ್ರತಾಂಡವವಾಡ್ತಿರುವ ಕೊರೋನಾ ಹೆಮ್ಮಾರಿಗೆ ಇಲ್ಲಿವರೆಗೆ 15,306 ಮಂದಿ ಬಲಿಯಾಗಿದ್ದಾರೆ. 3.50 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಅಮೆರಿಕಾದಲ್ಲಿ ಕೊರೋನಾಗೆ ನಿನ್ನೆ ಒಂದೇ ದಿನ 100 ಮಂದಿ ಮೃತಪಟ್ಟಿದ್ದು, ಒಟ್ಟಾರೆ 458 ಮಂದಿ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 34 ಸಾವಿರ ದಾಟಿದೆ.
ಚೀನಾ ಇಟಲಿ ಬಳಿಕ ಹೆಚ್ಚಿನ ಸಂಖ್ಯೆ ವೈರಸ್ ಬಾಧಿತರು ಇರೋದು ಅಮೆರಿಕಾದಲ್ಲಿ ಎಂದು ವರದಿಯಾಗಿದೆ. ಇಟಲಿಯಲ್ಲಿ ಎರಡು ದಿನಕ್ಕೆ ಹೋಲಿಸಿದ್ರೆ ನಿನ್ನೆ ಮೃತರ ಸಂಖ್ಯೆ ಕಡಿಮೆಯಾಗಿದೆ. ನಿನ್ನೆ 651 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 5500ಕ್ಕೆ ಏರಿಕೆಯಾಗಿದೆ. ಸ್ಪೇನ್‍ನಲ್ಲಿ 2182, ಇರಾನ್‍ನಲ್ಲಿ 1812, ಫ್ರಾನ್ಸ್ 674, ಬ್ರಿಟನ್ 281, ನೆದರ್ ಲೆಂಡ್‍ನಲ್ಲಿ 179, ಜರ್ಮನಿಯಲ್ಲಿ 111 ಮಂದಿ ಸಾವನ್ನಪ್ಪಿದ್ದಾರೆ. ಜರ್ಮನಿ ಚಾನ್ಸಲರ್ ಏಂಜೆಲಾ ಮಾರ್ಕೆಲ್‍ರಲ್ಲಿ ಸೋಂಕು ಲಕ್ಷಣ ಕಂಡು ಬಂದಿದ್ದು, ಕ್ವಾರಂಟೇನ್‍ನಲ್ಲಿ ಇರಿಸಲಾಗಿದೆ. ನ್ಯೂಯಾರ್ಕ್ ನಗರದ ಜೈಲುಗಳಲ್ಲಿ 38 ಮಂದಿಗೆ ಕೊರೋನಾ ಸೋಂಕು ಕಂಡು ಬಂದಿದೆ
Comments are closed.