ಕರ್ನಾಟಕ

ರಾಜ್ಯದಲ್ಲಿ ಮತ್ತೆ 4 ಪ್ರಕರಣ: ದೇಶಾದ್ಯಂತ 500 ದಾಟಿದ ಕೋವಿಡ್-19 ಸೋಂಕಿತರ ಸಂಖ್ಯೆ

Pinterest LinkedIn Tumblr


ಬೆಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಂಗಳವಾರ ಬೆಳಿಗ್ಗೆ ಕರ್ನಾಟಕದಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 37ಕ್ಕೇರಿದೆ.

ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು ಕರ್ನಾಟಕದಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 37ಕ್ಕೇರಿದೆ. ಸೋಂಕಿತರ ವಿವರವನ್ನು ರಾಜ್ಯ ಆರೋಗ್ಯ ಇಲಾಖೆ ಸಂಜೆ ನೀಡಲಿದೆ.

ದೇಶದಲ್ಲಿ ಅತೀ ಹೆಚ್ಚು ಕೋವಿಡ್-19 ಸೋಂಕಿತರು ಇರುವುದು ಮಹಾರಾಷ್ಟ್ರದಲ್ಲಿ . ಇಲ್ಲಿ ಸೋಂಕಿತರ ಸಂಖ್ಯೆ 97ಕ್ಕೇರಿದ್ದು, ಕೇರಳದಲ್ಲಿ 95 ಜನ ಸೋಂಕಿತರಿದ್ದಾರೆ.

ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 500ಕ್ಕೇರಿದೆ. ಇದರಲ್ಲಿ 36 ಜನರು ಗುಣಮುಖರಾಗಿದೆ.

Comments are closed.