ರಾಷ್ಟ್ರೀಯ

ಲಾಕ್ ಡೌನ್: ಮದ್ಯ ಮಾರಾಟ ನಿಷೇಧಿಸಿದಕ್ಕೆ ಯುವಕ ಆತ್ಮಹತ್ಯೆ

Pinterest LinkedIn Tumblr


ತಿರುವನಂತಪುರಂ: ಕೋವಿಡ್ 19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದರು. ಈ ಹಿನ್ನಲೆಯಲ್ಲಿ ಕೇರಳ ಸರ್ಕಾರ ಮದ್ಯ ಮಾರಾಟವನ್ನು ನಿಷೇಧಿಸಿದ್ದು, ಇದರಿಂದಾಗಿ ಮದ್ಯವ್ಯಸನಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.

ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಮದ್ಯ ನಿಷೇಧಿಸಿದ್ದರಿಂದ ಸಾನೋಜ್ ಕುಲಂಗಾರಾ (38ವರ್ಷ) ಎಂಬ ಯುವಕ ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದಾಗಿ ತ್ರಿಶ್ಶೂರ್ ಜಿಲ್ಲೆಯ ಕುನ್ನಾಕುಳಂ ಪೊಲೀಸರು ತಿಳಿಸಿದ್ದಾರೆ.

21 ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಲಾಕ್ ಡೌನ್ ಘೋಷಿಸಿದ್ದರಿಂದ ಕೇರಳ ಸರ್ಕಾಕ ಈ ವಾರ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ತುರ್ತು ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬೇರೆಲ್ಲಾ ವಸ್ತುಗಳ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಕರ್ನಾಟಕ ಸೇರಿದಂತೆ ದೇಶಾದ್ಯಂತ ಮದ್ಯ, ರೆಸ್ಟೋರೆಂಟ್, ಸಿನಿಮಾ ಥಿಯೇಟರ್, ಜಾತ್ರೆ ಸೇರಿದಂತೆ ಎಲ್ಲವೂ ಬಂದ್ ಆಗಿತ್ತು. ಅಗತ್ಯ ವಸ್ತುಗಳು ಮಾತ್ರ ಜನರಿಗೆ ಲಭ್ಯವಿದೆ.

Comments are closed.