ಮೂಡುಬಿದರೆ :ಮೂಡುಬಿದರೆಯ ಭಾರತೀಯ ಜನತಾ ಪಾರ್ಟಿಯ ಕಛೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಲಾಕ್‌ಡೌನ್ ಹಿನ್ನೆಲೆಯಲ್ಲಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಸರಳವಾಗಿ ನಡೆಸಲಾಯಿತು.ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಪಕ್ಷದ ಧ್ವಜಾರೋಹಣ ಮಾಡಿದರು.
ಜಿಲ್ಲಾದ್ಯಕ್ಷ ಸುದರ್ಶನ ಎಂ, ಶಾಸಕ ಉಮನಾಥ್ ಕೊಟ್ಯಾನ್,ಮಂಡಲ ಅಧ್ಯಕ್ಷ ಸುನಿಲ್ ಆಳ್ವ,ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್,ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ್,ಕೇಶವ ಹಾಗು ಪ್ರಮುಖರು ಉಪಸ್ಥಿತರಿದ್ದರು.


Comments are closed.