ಕರ್ನಾಟಕ

ಕೊರೋನಾ ವೈರಸ್ ರೌದ್ರನರ್ತನ; SSLC ಪರೀಕ್ಷೆಯನ್ನೇ ರದ್ದುಪಡಿಸುವಂತೆ ಪ್ರಸ್ತಾಪ

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ರೌದ್ರನರ್ತನ ಮುಂದುವರೆದಿದ್ದು, ಎಸ್ಎಸ್ಎಲ್’ಸಿ ಪರೀಕ್ಷೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಠಿಣವಾಗಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಪಡಿಸುವಂತೆ ಪ್ರಸ್ತಾಪಗಳು ರಾಜ್ಯ ಸರ್ಕಾರದ ಮುಂದ ಬರುತ್ತಿವೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಪ್ರಾಥಮಿಕ, ಪ್ರೌಢಶಾಲಾ ಕಾರ್ಯದರ್ಶಿಗಳಿಗೆ ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಎಸ್ ಹಿರೇಮಠ್ ಅವರು ಪತ್ರ ಬರೆದಿದ್ದು, ಪ್ರಸಕ್ತ ಸಾಲಿನ ಎಸ್ಎಸ್ಎಲ್’ಸಿ ಪರೀಕ್ಷೆಯನ್ನೇ ರದ್ದು ಪಡಿಸುವಂತೆ ಹಾಗೂ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಬರೆದ ಪರೀಕ್ಷೆಗಳನ್ನು ಆಧರಿಸಿ ಗ್ರೇಡಿಂಗ್ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಧಾರವಾಡ ವಿಭಾಗ ಶಿಕ್ಷಣಾಧಿಕಾರಿಗಳು ಈ ಕುರಿತು ಸಭೆ ನಡೆಸಿದ್ದು, ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. 700 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ವೇಳೆ ಸಾರಿಗೆ ವ್ಯವಸ್ಥೆ ವೇಳೆ ಹಾಗೂ ಪರೀಕ್ಷಾ ಕೇಂದ್ರಗಳ ಬಳಿಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಠಿಣ ಎಂದು ಅಧಿಕಾರಿಗಳು ತಿಳಿಸಿದ್ದಾರೆಂದು ತಿಳಿದುಬಂದಿದೆ.

ಪ್ರತೀ ಪರೀಕ್ಷಾ ಕೇಂದ್ರದಲ್ಲೂ 350 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಿಸುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆನ್ನಲಾಗುತ್ತಿದೆ.

Comments are closed.