
ತುಮಕೂರು: ಕಾಡು ಮೊಲವನ್ನು ಬೇಟೆಯಾಡಿ ಟಿಕ್‌ಟಾಕ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಧುಗಿರಿ ತಾಲೂಕಿನ ಕರಿದುಗ್ಗನಹಳ್ಳಿ ಗ್ರಾಮದ ವಿನಯ್, ವಿನಯ್ ಕುಮಾರ್ ಬಂಧಿತ ಆರೋಪಿಗಳು.
ಬಂಧಿತರು ಮೊಲ ಬೇಟೆಯಾಡಿ ನಂತರ ಮಾಂಸ ಕತ್ತರಿಸುವುದನ್ನು ಟಿಕ್ ಟಾಕ್ ಮಾಡಿ ಹರಿಬಿಟ್ಟಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಭಾರಿ ವೈರಲ್ ಆಗಿದ ಹಿನ್ನೆಲೆಯಲ್ಲಿ ತುಮಕೂರು ಉಪ ಅರಣ್ಯ ಸಂರಕ್ಷಾಣಾಧಿಕಾರಿ ಹೆಚ್.ಸಿ.ಗಿರೀಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ 2(16), 9, 39, 50, 51 ಅಡಿ ಪ್ರಕರಣ ದಾಖಲಾಗಿದೆ.
Comments are closed.