ಕರಾವಳಿ

ಇಂದು ಮಂಗಳೂರು ಏರ್ ಪೋರ್ಟ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ

Pinterest LinkedIn Tumblr

ಮಂಗಳೂರು,ಮೇ.18 : ಲಾಕ್‌ಡೌನ್‌ನಿಂದಾಗಿ ದುಬಾೖಯಲ್ಲಿ ಸಿಲುಕಿ ಕೊಂಡಿರುವ 35 ಗರ್ಭಿಣಿಯರ ಸಹಿತ 173 ಮಂದಿ ಪ್ರಯಾಣಿಕರು ಕೇಂದ್ರ ಸರಕಾರದ “ವಂದೇ ಭಾರತ’ ಕಾರ್ಯಾಚರಣೆಯಂತೆ ದುಬಾೖಯಿಂದ ಎರಡನೇ ವಿಮಾನದಲ್ಲಿ ಇಂದು ಸಂಜೆ ಮಂಗಳೂರಿಗೆ ಬರಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೇ 18ರಂದು ಬೆಳಗ್ಗೆ 11 ಗಂಟೆಯಿಂದ ಸಂಪೂರ್ಣ ಸ್ಯಾನಿಟೈಸೇಶನ್ ಪ್ರಕ್ರಿಯೆ ನಡೆಯಲಿದೆ.

ಸ್ಯಾನಿಟೈಸೇಶನ್ ಪ್ರಕ್ರಿಯೆ ನಡೆಯಲಿರುವ ಹಿನ್ನೆಲೆಯಲ್ಲಿ ಹಾಗೂ ವಿದೇಶದಲ್ಲಿರುವ ಭಾರತೀಯರು ಮಂಗಳೂರಿಗೆ ಆಗಮಿಸುತ್ತಿರುವ ಸಂದರ್ಭ ಅವರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ ಕಳಿಸಲು ಇರುವ ಹಿನ್ನೆಲೆಯಲ್ಲಿ ಸೋಮವಾರ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Comments are closed.