ಉಡುಪಿ: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೋನ ಸಂಕಷ್ಟದ ಈ ಸಮಯದಲ್ಲಿ ಬೇರೆ ರಾಜ್ಯಗಳಿಂದ ಬಂದು ಉಡುಪಿಯಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರು ಅವರವರ ರಾಜ್ಯಗಳಿಗೆ ತೆರಳಲು ಕೋರಿಕೊಂಡ ಹಿನ್ನೆಲೆ ಪ್ರತಿ ನಿತ್ಯ ಆಯಾ ರಾಜ್ಯಗಳಿಗೆ ತೆರಳಲು ವ್ಯವಸ್ಥೆ ಮಾಡಲಾಗುತ್ತಿದೆ. ಅದರಂತೆ ಬುಧವಾರ ಜಾರ್ಖಂಡ್ ಗೆ ರೈಲಿನ ಮೂಲಕ 1600 ವಲಸೆ ಕಾರ್ಮಿಕರು ಹೊರಟಿದ್ದಾರೆ.

ಲಾಕ್ ಡೌನ್ ನಂತರದ ದಿನಗಳಲ್ಲಿ ಕೆಲಸವಿಲ್ಲದೆ ಸಂದಿಗ್ಧ ಸ್ಥಿತಿಯಲ್ಲಿ ತಮ್ಮ ತಮ್ಮ ರಾಜ್ಯಗಳಿಗೆ ಹೊರಟ ವಲಸೆ ಕಾರ್ಮಿಕರು ಅನ್ನಬ್ರಹ್ಮನ ಕ್ಷೇತ್ರವಾದ ಉಡುಪಿಯಿಂದ ಹಸಿವಿನಿಂದ ತೆರಳಬಾರದು ಎಂಬ ಧ್ಯೇಯೋದ್ದೇಶದೊಂದಿಗೆ ಉಡುಪಿ ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ (ರಿ) ಮತ್ತು ಆಸರೆ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಪ್ರತಿ ನಿತ್ಯ ಊಟದ ವ್ಯವಸ್ಥೆ ಮಾಡಲಾಗಿದ್ದು, ಅಂತೆಯೇ ಉಡುಪಿಯಿಂದ ಜಾರ್ಖಂಡ್ ಗೆ ಹೊರಟ 1600 ಮಂದಿಗೆ ಊಟವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ನಗರಸಭಾ ಪೌರಾಯುಕ್ತ ಆನಂದ್ ಸಿ ಕಲ್ಲೋಳಿಕರ್, ಮತ್ತು ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಮಂಜುನಾಥ್ ಹಾಗೂ ರಾಘವೇಂದ್ರ ಕಿಣಿ, ಮಂಜುನಾಥ ಹೆಬ್ಬಾರ್ ಮತ್ತು ಪೊಲೀಸ್ ಅಧಿಕಾರಿಗಳು ಹಾಗೂ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭ ಶಾಸಕರಾದ ಕೆ. ರಘುಪತಿ ಭಟ್ ಇವರು ಸಹಕರಿಸಿದ ಸರ್ವರಿಗೂ ವಿಶೇಷವಾದ ಅಭಿನಂದನೆ ಸಲ್ಲಿಸಿದರು.
Comments are closed.