ಮಂಗಳೂರು : ಕೋವಿಡ್-19 ಲಾಕ್‍ಡೌನ್‍ನಿಂದ ಕದ್ರಿ ಉದ್ಯಾನವನ ಮತ್ತು ಜಿಂಕೆ ಉದ್ಯಾನವನಕ್ಕೆ ಸಾರ್ವಜನಿಕ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.
ಸರ್ಕಾರದ ಆದೇಶದನ್ವಯ ಹಾಗೂ ಜಿಲ್ಲಾಧಿಕಾರಿಗಳ ಅನುಮತಿಯ ಮೇರೆಗೆ ಕದ್ರಿ ಉದ್ಯಾನವನವನ್ನು ಬೆಳಿಗ್ಗೆ 7 ರಿಂದ 9 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ವಾಯುವಿಹಾರ (walking)ಕ್ಕೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿದೆ.
ಕೋವಿಡ್-19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Comments are closed.