ಉಡುಪಿ: ಉಡುಪಿಯಲ್ಲಿ ಮೂವರು ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಅಜೆಕಾರು, ಕಾರ್ಕಳ, ಬ್ರಹ್ಮಾವರ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.

ಭಾನುವಾರ ಉಡುಪಿಯಲ್ಲಿ ಒಟ್ಟು 18 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ಈ ಪೈಕಿ ಅಜೆಕಾರು, ಕಾರ್ಕಳ ಠಾಣೆಯ ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಮೂರು ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಈ ಮೂವರ ಕೊರೊನಾ ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದ್ದು ಪೊಲೀಸರಿಗೆ ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ಹಲವು ಪೊಲೀಸರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ ಅಲ್ಲದೇ 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗುತ್ತದೆ ಅಲ್ಲದೆ ಸ್ಯಾನಿಟೈಸರ್ ಕೂಡ ಮಾಡಲಾಗುತ್ತೆ.
ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಮೂರು ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಈ ಮೂರು ಠಾಣೆಗಳನ್ನು ಸ್ಯಾನಿಟೈಸ್ ಮಾಡಿಸಲಿದ್ದು ೪೮ ಗಂಟೆಗಳಲ್ಲಿ ಪುನಃ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
Comments are closed.