ಕುಂದಾಪುರ: ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಮುಂಜಾಗೃತಾ ಕ್ರಮವಾಗಿ ಭಾನುವಾರ ಗಂಗೊಳ್ಳಿ ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಯಿತು.

ರಕ್ತದಾನಿ ದಿವಾಕರ ಎನ್.ಖಾರ್ವಿ ಮತ್ತು ಮತ್ಸ್ಯೋದ್ಯಮಿ ಕೆ.ಅಬ್ದುಲ್ ರೆಹಮಾನ್ ನಾಗೂರು ಇವರ ಪ್ರಾಯೋಜಕತ್ವದಲ್ಲಿ ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್., ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗುತ್ತಿರುವುದರಿಂದ ಠಾಣೆಗೆ ಆಗಮಿಸುವ ಸಾರ್ವಜನಿಕರ ಮತ್ತು ಪೊಲೀಸ್ ಸಿಬ್ಬಂದಿಯ ಹಿತರಕ್ಷಣೆಗಾಗಿ ಠಾಣೆಯನ್ನು ಸ್ಯಾನಿಟೈಸ್ ಮಾಡಲು ನಿರ್ಧರಿಸಿ ದಾನಿಗಳ ಸಹಾಯದಿಂದ ಇಂದು ಠಾಣೆಯನ್ನು ಸಂಪೂರ್ಣ ಸ್ವಚ್ಛಗೊಳಿಸಿ ಸ್ಯಾನಿಟೈಸ್ ಮಾಡಲಾಗಿದೆ. ಠಾಣೆಗೆ ಬರುವ ಜನರಿಗೆ ಕೈತೊಳೆಯಲು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಕೋವಿಡ್-19 ವೈರಾಣು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ರಕ್ತದಾನಿ ದಿವಾಕರ ಎನ್.ಖಾರ್ವಿ ಮತ್ತು ಮತ್ಸ್ಯೋದ್ಯಮಿ ಕೆ.ಅಬ್ದುಲ್ ರೆಹಮಾನ್ ನಾಗೂರು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
Comments are closed.