
ತಿರುವನಂತರಪುರಂ: ಪಾಪಿಗಳು ಪೈನಾಪಲ್ ಹಣ್ಣಿನ ಒಳಗಡೆ ಪಟಾಕಿ ಇಟ್ಟು ಗರ್ಭಿಣಿ ಆನೆಗೆ ತಿನ್ನಿಸಿದ್ದು, ಪಟಾಕಿ ಸಿಡಿದು ಆನೆ ಮೃತಪಟ್ಟಿರುವ ಧಾರುಣ ಘಟನೆ ಕೇರಳದಲ್ಲಿ ನಡೆದಿದೆ.

ಬುಧವಾರ ಘಟನೆ ನಡೆದಿದ್ದು, ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸ್ಥಳೀಯರು ಪಟಾಕಿ ತುಂಬಿದ ಪೈನಾಪಲ್ ಹಣ್ಣನ್ನು ಗರ್ಭಿಣಿ ಆನೆಗೆ ತಿನ್ನಿಸಿದ್ದಾರೆ. ನಂತರ ಆನೆಯ ಬಾಯಿಯಲ್ಲಿ ಪಟಾಕಿ ಬ್ಲಾಸ್ಟ್ ಆಗಿ ಸಾವನ್ನಪ್ಪಿದೆ. ಘಟನೆ ಸಂಭವಿಸುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಆದರೆ ಆನೆ ಆಗಲೇ ಸಾವನ್ನಪ್ಪಿದೆ. ಘಟನೆ ನಡೆದ ಕುರಿತು ಮಲಪ್ಪುರಂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಅರಣ್ಯಾಧಿಕಾರಿಯೊಬ್ಬರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.
ಗರ್ಭಿಣಿ ಆನೆ ಆಹಾರ ಹುಡುಕಿಕೊಂಡು ಗ್ರಾಮಕ್ಕೆ ತೆರಳಿತ್ತು. ಹೀಗೆ ದಾರಿಯಲ್ಲಿ ಓಡಾಡುತ್ತಿರುವಾಗ ಕೆಲ ಗ್ರಾಮಸ್ಥರು ಪಟಾಕಿ ತುಂಬಿದ ಪೈನಾಪಲ್ನ್ನು ಆನೆಯ ಸೊಂಡಿಲಿಗೆ ಇಟ್ಟಿದ್ದು, ಆನೆ ಅದನ್ನು ತಿಂದಿದೆ. ಬಾಯಿಯಲ್ಲಿ ಹಾಕಿಕೊಳ್ಳುತ್ತಿದ್ದಂತೆ ಪಟಾಕಿ ಸಿಡಿದಿದೆ. ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಅರಣ್ಯಾಧಿಕಾರಿ ಮೋಹನ್ ಕೃಷ್ಣನ್ ಅವರು ಈ ವಿಡಿಯೋವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ಮನಮುಟ್ಟುವ ಸಾಲುಗಳನ್ನು ಬರೆದಿದ್ದಾರೆ. ಅವಳು ಎಲ್ಲರನ್ನೂ ನಂಬಿದ್ದಳು, ಯಾವಾಗ ತಾನು ತಿಂದ ಪೈನಾಪಲ್ ಬ್ಲಾಸ್ಟ್ ಆಯಿತೋ ಆಗ ಆಘಾತಕ್ಕೊಳಗಾಗಿದ್ದಾಳೆ. ಆದರೆ ಅವಳಿಗಾಗಿ ಅಲ್ಲ ಹೊಟ್ಟೆಯಲ್ಲಿರುವ ತನ್ನ ಮಗುವಿಗಾಗಿ. ಅವಳು ಇನ್ನು 18-20 ತಿಂಗಳಲ್ಲಿ ಮಗುವಿಗೆ ಜನ್ಮ ನೀಡುತ್ತಿದ್ದಳು ಎಂದು ಬರೆದುಕೊಂಡಿದ್ದಾರೆ.
ಪಟಾಕಿ ಸಿಡಿದಿದ್ದರಿಂದ ಆನೆಯ ಬಾಯಿ ಹಾಗೂ ನಾಲಗೆಗೆ ಗಂಭೀರ ಗಾಯಗಳಾಗಿದ್ದವು. ಗರ್ಭಿಣಿ ಆನೆ ಯಾವೊಬ್ಬ ಗ್ರಾಮಸ್ಥರಿಗೂ ತೊಂದರೆ ನೀಡಿರಲಿಲ್ಲ. ಬಾಯಿಯಲ್ಲಿ ಪಟಾಕಿ ಸಿಡಿಯುತ್ತಿದ್ದಂತೆ ನೋವಿನಲ್ಲಿ ರಸ್ತೆ ತುಂಬಾ ಓಡಾಡಿದೆ. ಬಾಯಲ್ಲಿ ಪಟಾಕಿ ಸಿಡಿಯುತ್ತಿದ್ದಂತೆ ಆನೆ ವೆಲ್ಲಿಯಾರ್ ನದಿಯಲ್ಲಿ ಮುಳುಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಆನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಅಧಿಕಾರಿಗಳು ನೀಲಕಂಠನ್ ಹಾಗೂ ಸುರೇಂದ್ರನ್ ಎಂಬ ಎರಡು ಆನೆಗಳನ್ನು ಕರೆ ತಂದಿದ್ದು, ಅಷ್ಟೊತ್ತಿಗಾಗಲೇ ಸಂಜೆ 4ರ ಸುಮಾರಿಗೆ ಆನೆ ನದಿಯಲ್ಲೇ ಸಾವನ್ನಪ್ಪಿದೆ.
Comments are closed.