ಕರಾವಳಿ

ದ.ಕ.ಜಿಲ್ಲೆಯಲ್ಲಿ ಇಂದು 167 ಮಂದಿಯಲ್ಲಿ ಪಾಸಿಟಿವ್ ಪತ್ತೆ: ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿರುವ ಸೋಂಕು

Pinterest LinkedIn Tumblr

ಮಂಗಳೂರು, ಜುಲೈ.09 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು ಗುರುವಾರ ಮತ್ತೊಮ್ಮೆ ದಾಖಲೆಯ 167 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಕೊರೊನಾ ಸೋಂಕು ಪ್ರಕರಣಗಳಲ್ಲಿ ಈ ದಿನ ಮತ್ತೊಮ್ಮೆ ಹೆಚ್ಚಿನ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿದೆ.

ಪ್ರಾಥಮಿಕ ಸಂಪರ್ಕದಿಂದಲೇ 64 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 42 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 6 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ.

ಬೆಂಗಳೂರಿನಿಂದ ಮರಳಿದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್, ದುಬೈಯಿಂದ ಮರಳಿದ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಪ್ರೀಸರ್ಜರಿ ಸ್ಯಾಂಪಲ್ ಪಾಸಿಟಿವ್ 13 ಮಂದಿಯಲ್ಲಿ ದೃಢಪಟ್ಟಿದೆ. 38 ಸೋಂಕಿತರ ಮೂಲ ಪತ್ತೆ ಹಚ್ಚಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿದೆ.  ಈ ನಡುವೆ ಜಿಲ್ಲೆಯಲ್ಲಿ 702 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 977 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದಿನ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೋನಾ ಸ್ಪೋಟ

ದಕ್ಷಿಣ ಕನ್ನಡದಲ್ಲಿ ಇಂದು 167 ಕೊರೋನಾ ಪಾಸಿಟಿವ್ ಪತ್ತೆ

ದಿನೇ ದಿನೇ ಕರಾವಳಿಯಲ್ಲಿ ಹೆಚ್ಚಾಗುತ್ತಿದೆ ಸೋಂಕಿತರ ಸಂಖ್ಯೆ

ಪ್ರಾಥಮಿಕ ಸಂಪರ್ಕದಿಂದಲೇ 64 ಮಂದಿಗೆ ಕೊರೋನಾ ಸೋಂಕು

ILI -42 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 38 ಮಂದಿಗೆ ಪಾಸಿಟಿವ್

ಶಸ್ತ್ರ ಚಿಕಿತ್ಸೆಯ ಮೊದಲು‌ ಮಾಡಿದ ಟೆಸ್ಟ್ ನಲ್ಲಿ 13 ಮಂದಿಗೆ ಪಾಸಿಟಿವ್

SARI -6 ಮಂದಿಗೆ ಪಾಸಿಟಿವ್

ವಿದೇಶದಿಂದ ಬಂದ ಮೂವರಿಗೆ ಕೊರೋನಾ ಪಾಸಿಟಿವ್

ಅಂತರ್ ಜಿಲ್ಲೆಯಿಂದ ಬಂದ ಓರ್ವನಿಗೆ ಕೊರೋನಾ‌ ಪಾಸಿಟಿವ್

ದ.ಕ ಜಿಲ್ಲೆಯಲ್ಲಿ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿದೆ ಸೋಂಕು.

Comments are closed.