ರಾಷ್ಟ್ರೀಯ

ದೇಶದಲ್ಲಿ ಇಂದು (ಬುಧವಾರ) 29,429 ಮಂದಿಗೆ ಕೊರೋನಾ: 582 ಮಂದಿ ಸಾವು

Pinterest LinkedIn Tumblr


ನವದೆಹಲಿ: ದೇಶದಾದ್ಯಂತ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 29,429 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,36,6181ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಈ ನಡುವೆ ಒಂದೇ ದಿನ 582 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 24,309ಕ್ಕೆ ಏರಿಕೆಯಾಗಿದೆ.

ಇನ್ನು 9,36,6181 ಮಂದಿ ಸೋಂಕಿತರ ಪೈಕಿ 5,92,032 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನು ದೇಶದಲ್ಲಿ 3,19,840 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಈ ನಡುವೆ ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,67,665 ತಲುಪಿದ್ದು, 10,695 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 1,47,324 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, 2,099 ಮಂದಿ ಬಲಿಯಾಗಿದ್ದಾರೆ.

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 1,15,346 ತಲುಪಿದ್ದು, 3,446 ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

Comments are closed.