ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಅಪ್​ಲೋಡ್​ ಮಾಡುತ್ತಿದ್ದ ಟೆಕ್ಕಿಗಳಿಬ್ಬರ ಬಂಧನ

Pinterest LinkedIn Tumblr


ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಆರೋಪಿಗಳನ್ನು ಸೈಬರ್​ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಅಜಯ್ ತನಿಕಾಚಲಂ ಹಾಗೂ ವಿಶ್ವಕ್ ಬಂಧಿತ ಟೆಕ್ಕಿಗಳು. ಪ್ರಸಿದ್ಧ ಕಾಲೇಜು ಒಂದರ ಉಪನ್ಯಾಸಕಿಯರು, ಹಳೆಯ ವಿದ್ಯಾರ್ಥಿನಿಯರು ಹಾಗೂ ಪ್ರಸ್ತುತ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಫೋಟೋಗಳನ್ನ ಆರೋಪಿಗಳು ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡುತ್ತಿದ್ದರು.

ಈ ಸಂಬಂಧ ಸಿಇಎನ್ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಕಾರ್ಯಾಚರಣೆಗೆ ಇಳಿದ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿತರಿಂದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ.

Comments are closed.