ಕರ್ನಾಟಕ

ರಾಜ್ಯದಲ್ಲಿ ಇಂದು (ಗುರುವಾರ) 6,128 ಕೊರೋನಾ ಪ್ರಕರಣಗಳು ಪತ್ತೆ: 83 ಸಾವು

Pinterest LinkedIn Tumblr


ಬೆಂಗಳೂರು (ಜು. 30): ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿಲ್ಲ. ಇಂದು ರಾಜ್ಯದಲ್ಲಿ ದಾಖಲೆಯ ಪ್ರಮಾಣದ ಕೊರೋನಾ ಕೇಸ್​ಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇಂದು ಒಂದೇ ದಿನ 6,128 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ಕೇಸ್​ಗಳು 6 ಸಾವಿರದ ಗಡಿ ದಾಟಿವೆ. ಈ ಮೂಲಕ ರಾಜ್ಯದ ಕೊರೋನಾ ಕೇಸ್​ಗಳ ಸಂಖ್ಯೆ 1.18 ಲಕ್ಷಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಇಂದು 6,128 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇಂದು 83 ಕೊರೋನಾ ರೋಗಿಗಳು ಸಾವನ್ನಪ್ಪಿದ್ದು, 3,793 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಒಟ್ಟು 46,694 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 2,230 ಕೊರೋನಾ ರೋಗಿಗಳು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು 2,233 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ 430, ಬಳ್ಳಾರಿಯಲ್ಲಿ 343, ಉಡುಪಿಯಲ್ಲಿ 248, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 224, ಕಲಬುರ್ಗಿಯಲ್ಲಿ 220 ಬೆಳಗಾವಿಯಲ್ಲಿ 202, ದಕ್ಷಿಣ ಕನ್ನಡದಲ್ಲಿ 198, ಧಾರವಾಡದಲ್ಲಿ 180, ರಾಯಚೂರಿನಲ್ಲಿ 166 ಕೊರೋನಾ ಕೇಸ್​ಗಳು ಪತ್ತೆಯಾಗಿವೆ.

ಇಂದು ಕರ್ನಾಟಕದಲ್ಲಿ 620 ಕೊರೋನಾ ರೋಗಿಗಳು ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ ಒಟ್ಟಾರೆ 1,18,632 ರೋಗಿಗಳಿಗೆ ಕೊರೋನಾ ಸೋಂಕು ತಗುಲಿದೆ. ಅವರಲ್ಲಿ 46,694 ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ 69,700 ಕೊರೋನಾ ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.