ಕರ್ನಾಟಕ

ಕೊರೋನಾ ಸೋಂಕಿತ ಯಡಿಯೂರಪ್ಪ ಆರೋಗ್ಯ ಸ್ಥಿರ

Pinterest LinkedIn Tumblr


ಬೆಂಗಳೂರು (ಆಗಸ್ಟ್‌ 03); ಮಾರಣಾಂತಿಕ ಕೊರೋನಾ ಸೋಂಕಿಗೆ ತುತ್ತಾಗಿ ಆಗಸ್ಟ್ 2 ರಂದು ರಾತ್ರಿ 11 ಗಂಟೆಗೆ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆರೋಗ್ಯ ಉತ್ತಮವಾಗಿದೆ ಎಂದು ವೈದ್ಯರ ತಂಡ ಮಾಹಿತಿ ನೀಡಿದೆ.

ಈ ಕುರಿತು ಬುಲೆಟಿನ್‌ ಬಿಡುಗಡೆ ಮಾಡಿವರು ಮಣಿಪಾಲ್‌ ಆಸ್ಪತ್ರೆಯ ವೈದ್ಯರ ತಂಡ, “ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಲ್ಲಿ ಕೊರೋನಾ ರೋಗದ ಲಕ್ಷಣದ ತೀವ್ರತೆ ಕಡಿಮೆ ಇದೆ. ಅವರ ಆರೋಗ್ಯ ಸ್ಥಿರವಾಗಿದೆ. ಪ್ರೋಟೋಕಾಲ್‌ಗಳ ಪ್ರಕಾರ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ಮಲ್ಟಿಡಿಸಿಪ್ಲಿನರಿ ವೈದ್ಯರ ತಂಡದಿಂದ ಸಿಎಂಗೆ ಚಿಕಿತ್ಸೆ ನೀಡುತ್ತಿದ್ದು, ಹೆದರುವ ಅಗತ್ಯ ಇಲ್ಲ” ಎಂದು ತಿಳಿಸಿದೆ.

ಈಗಾಗಲೇ ಯಡಿಯೂರಪ್ಪನವರ ಜೊತೆ ನಿಕಟ ಸಂಪರ್ಕ ಹೊಂದಿದ್ದ ಹಾಗೂ ಅವರನ್ನು ಭೇಟಿ ಮಾಡಿದ್ದ ಎಲ್ಲರನ್ನೂ ಹೋಮ್​​ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಜತೆಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿ ಮತ್ತು ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿಸಿ ಕುಟುಂಬ ಸದಸ್ಯರು ಯಾರಿಗೆ ಪ್ರವೇಶಕ್ಕೆ ಅವಕಾಶ ನೀಡದೇ ನಿರ್ಬಂಧಿಸಲಾಗಿದೆ.

ಇನ್ನು, ಸಿಎಂ ನಿವಾಸದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಿಗೆ ಕೋವಿಡ್-19 ಪರೀಕ್ಷೆ ಮಾಡಲಾಗುತ್ತಿದೆ. ಸಿಎಂಗೆ ಕೊರೋನಾ ಕಾಣಿಸಿಕೊಂಡ ಬೆನ್ನಲ್ಲೇ ಇಂದು ಬೆಳಗ್ಗೆ ಆಗಮಿಸಿದ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ, ಗೃಹ ಕಚೇರಿ ಕೃಷ್ಣಾ ಮತ್ತು ಅಧಿಕೃತ ನಿವಾಸ ಕಾವೇರಿ ಆವರಣವನ್ನು ಸ್ಯಾನಿಟೈಸ್ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾ ಮತ್ತು ಸಿಎಂ ಅಧಿಕೃತ ನಿವಾಸಕ್ಕೆ ಹೊರಗಡೆಯಿಂದ ಪ್ರವೇಶ ನಿರ್ಬಂಧಿಸಲಾಗಿದೆ. ರಜೆ ಮೇಲೆ ಊರಿಗೆ ತೆರಳಿದ್ದ ಸಿಬ್ಬಂದಿ ಮತ್ತು ಸಿಎಂ ಕುಟುಂಬ ಸದಸ್ಯರನ್ನು ಕೋವಿಡ್​-19 ಟೆಸ್ಟ್​ಗೆ ಒಳಪಡಿಸಲಾಗಿದೆ. ಜತೆಗೆ ಆಂಟಿಜನ್ ಟೆಸ್ಟ್ ಮಾಡಲಾಗುತ್ತಿದೆ.

ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವಸತಿ ಸಚಿವ ವಿ ಸೋಮಣ್ಣ‌ಗೆ ಕೋವಿಡ್ ಟೆಸ್ಟ್‌ ಮಾಡಿದ್ದು, ರಿಸಲ್ಟ್ ನೆಗೆಟಿವ್ ಬಂದಿದೆ. ಹಾಗೆಯೇ ಸಿಎಂ ನಿವಾಸದ ಅಡುಗೆ ಸಿಬ್ಬಂದಿ ಮತ್ತು ಕಾರ್​​ ಚಾಲಕ ಸೇರಿದಂತೆ ಒಂಬತ್ತು ಮಂದಿಗೆ ಕೊರೋನಾ ತಗುಲಿದೆ.

ಇದನ್ನೂ ಓದಿ : ಅಂತಾರಾಷ್ಟ್ರೀಯ ಪ್ರಯಾಣಿಕರು ಕ್ವಾರಂಟೈನ್‌ನಿಂದ ವಿನಾಯಿತಿ ಪಡೆಯಬೇಕೆ?; ಹಾಗಿದ್ದರೆ RT-PCR ನೆಗೆಟಿವ್ ಪರೀಕ್ಷಾ ವರದಿ ಪಡೆಯಿರಿಕೊರೋನಾ ಕಾಣಿಸಿಕೊಂಡರೂ ಈ 9 ಮಂದಿಗೆ ಯಾವುದೇ ರೋಗಲಕ್ಷಣಗಳು ಇಲ್ಲ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಎಲ್ಲರನ್ನೂ ಕೋವಿಡ್ ಕೇರ್ ಸೆಂಟರ್​​ಗೆ ಕಳುಹಿಸಿಕೊಡಲಾಗಿದೆ. ಉಳಿದವರಿಗೆ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ.

ಕೊರೋನಾ ಪಾಸಿಟಿವ್​ ವರದಿ ಬಂದ ಬಗ್ಗೆ ಭಾನುವಾರ ಬಿಎಸ್​ವೈ ಟ್ವೀಟ್​ ಮಾಡಿದ್ದರು. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ” ಎಂದು ಹೇಳಿದ್ದರು. ಹೀಗಾಗಿ ಅವರ ಟ್ರಾವೆಲ್​ ಹಿಸ್ಟರಿಯನ್ನು ಪರೀಕ್ಷಿಸಿ ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್​ ಮಾಡಲಾಗಿದೆ.

Comments are closed.