ಕರಾವಳಿ

ಅಯೋಧ್ಯೆ ಭೂಮಿ ಪೂಜೆ: ಉಡುಪಿ ಜಿಲ್ಲೆಯಲ್ಲಿ (Dry Day) ಮದ್ಯ ಮಾರಾಟ ನಿಷೇಧ

Pinterest LinkedIn Tumblr

ಉಡುಪಿ: ಆಗಸ್ಟ್ 5 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದೆ.

ಈ ಸಮಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ , ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳ ಮದ್ಯ ಮಾರಾಟವನ್ನು , ಆಗಸ್ಟ್ 4 ರ ರಾತ್ರಿ 8 ಘಂಟೆಯಿಂದ ಆಗಸ್ಟ್ 6 ರ ಬೆಳಿಗ್ಗೆ 6 ಘಂಟೆಯವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಈ ದಿನಗಳಂದು , ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಒಣದಿನ (ಡ್ರೈ ಡೇ) ಎಂದು ಘೋಷಿಸಿ , ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

Comments are closed.