ಆರೋಗ್ಯ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋವಿಡ್-19 ವರದಿ ನೆಗೆಟಿವ್

Pinterest LinkedIn Tumblr

ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢವಾದ ಬೆನ್ನಲ್ಲೆ ಅವರ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕೋವಿಡ್-19 ಪರೀಕ್ಷಾ ವರದಿ ಬಂದಿದ್ದು ನೆಗೆಟಿವ್ ಆಗಿದೆ.

ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಸಚಿವ ಕೋಟ, ‘ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಸಂಪರ್ಕದಲ್ಲಿ ಇದ್ದೆ ಎನ್ನುವ ಕಾರಣಕ್ಕೆ ಇಂದಿನ ತನಕ ಹೋಂ ಕ್ವಾರೆಂಟೈನ್’ನಲ್ಲಿದ್ದು ಕೋವಿಡ್-19 ಪರೀಕ್ಷೆ ಮಾಡಿಸಿದ್ದು ಅದರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಇಂದಿನಿಂದ (ಬುಧವಾರದಿಂದ) ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತಿದ್ಧೇನೆ ಎಂದು ಬರೆದುಕೊಂಡಿದ್ದಾರೆ.

ಕಳೆದೆರಡು ದಿನದಿಂದ ತನ್ನ ಮನೆಯಲ್ಲೇ ಸೆಲ್ಫ್ ಕ್ವಾರೆಂಟೈನ್ ಆಗಿದ್ದ ಸಚಿವ ಕೋಟ ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ‌.

Comments are closed.