ಕರ್ನಾಟಕ

ರಾಮಮಂದಿರ ನಿರ್ಮಾಣದ ಕನಸು ಪೂರ್ಣಗೊಂಡಿತು, ಪ್ರಹ್ಲಾದ್ ಜೋಶಿ

Pinterest LinkedIn Tumblr

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿಪೂಜೆ ಮಾಡುವ ಮೂಲಕ ಕೋಟ್ಯಂತರ ಭಾರತೀಯರ ಕನಸು ಇದೀಗ ಪೂರ್ಣಗೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋ‍ಶಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣ ಭೂಮಿಪೂಜೆ ಕೋಟ್ಯಂತರ ಪ್ರಭು ಶ್ರೀ ರಾಮ ಭಕ್ತ ಭಾರತೀಯರಿಗೆ ಐತಿಹಾಸಿಕ ಮತ್ತು ಭಾವಪೂರ್ಣ ಕ್ಷಣವಾಯಿತು ಎಂದು ಟ್ವಿಟ್ಟರ್‌ನಲ್ಲಿ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

 

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿ ಪೂಜೆ ಪೂಜಾ ಕಾರ್ಯಕ್ರಮ ನಡೆಯುತ್ತಿದ್ದು ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ, ಆರ್‌ಎಸ್‌ಎಸ್ ವರಿಷ್ಠ ಮೋಹನ್ ಭಾಗವತ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

ಭೂಮಿ ಪೂಜೆ ಹಿನ್ನೆಲೆಯಲ್ಲಿ ಅಯೋಧ್ಯೆ ನಗರ ಅಲಂಕಾರದಿಂದ ಕಂಗೊಳಿಸುತ್ತಿದೆ. ಇದಕ್ಕೂ ಮುನ್ನ ಮಂಗಳವಾರ ಹಲವು ಧಾರ್ಮಿಕ ವಿಧಿವಿಧಾನಗಳು ನಡೆದಿವೆ. ಆ.04 ರ ಸಂಜೆ ದೀಪೋತ್ಸವ, ದೀಪ ಅಲಂಕಾರಗಳಿಂದ ಅಯೋಧ್ಯೆ, ವಿಶೇಷವಾಗಿ ಸರಯೂ ನದಿ ಬಳಿ ಇರುವ ಘಾಟ್ ಗಳು ಮಿಂಚುತ್ತಿದ್ದವು.

ಇನ್ನು ಅಯೋಧ್ಯೆಯಲ್ಲಿ ಭೂಮಿಪೂಜೆ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹಿಂದೂ ಸಂಘಟನೆಗಳು ಹಾಗೂ ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್‌ ಯಡಿಯೂರಪ್ಪ ಸೇರಿದಂತೆ ಸಚಿವರು ಹಾಗೂ ಬಿಜೆಪಿಯ ಶಾಸಕರು ಕಾರ್ಯಕ್ರಮಕ್ಕೆ ಶುಭಕೋರಿದ್ದಾರೆ.

 

Comments are closed.