ಮಂಗಳೂರು, ಆಗಸ್ಟ್.05 : ಕರ್ನಾಟಕ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 5ರವರೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಬಳಿಕ ಆಗಸ್ಟ್ 6ರಿಂದ 8ರ ವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಮುಂಗಾರು ಮಳೆಯು ಚುರಕಾಗಲಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರದಿಂದ ಇರಲು ದ.ಕ.ಜಿಲ್ಲಾಡಳಿತ ಮನವಿ ಮಾಡಿದೆ.
ಈ ವೇಳೆ ಸಮುದ್ರ ತೀರದಲ್ಲಿ 3 ರಿಂದ 3.6 ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದ್ದು ಸಮುದ್ರದ ಹತ್ತಿರ ವಾಸಿಸುವ ಜನರಿಗೆ ಜಾಗರೂಕರಾಗಿರಲು ಜಿಲ್ಲಾಡಳಿತ ತಿಳಿಸಿದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವೂದೇ ಸಮಸ್ಯೆಗಳಿಗೆ ತುರ್ತು ಸೇವೆಯ ಟೋಲ್ ಫ್ರೀ ಸಂಖ್ಯೆ 24×7 ಕಂಟ್ರೋಲ್ ನಂಬ್ರ 1077ಕ್ಕೆ ಸಂಪರ್ಕಿಸುವಂತೆ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Comments are closed.