ಕರಾವಳಿ

ಖಾಸಗಿ ಆಸ್ಪತ್ರೆಗಳು ಶೇ. 50 ಹಾಸಿಗೆ ನೀಡಲೇಬೇಕು : ಸಚಿವ ಕೋಟ

Pinterest LinkedIn Tumblr

ಕೋವಿಡ್ ನಿರ್ವಹಣೆಗೆ ಖಾಸಗೀ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ಯ೯ದ ಶೇಕಡಾ 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋನಾ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಖಾಸಗೀ ಆಸ್ಪತ್ರೆಗಳಿಗೆ ಸರಕಾರದಿಂದ ರ್ಯಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದೆ ಎಂದರು.

ಸಭೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಜಿ.ಪಂ.ಸಿಇಒ ಡಾ. ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ವೆನ್ ಲಾಕ್ ಅಧೀಕ್ಷಕ ಡಾ. ಸದಾಶಿವ, ಎ.ಜೆ. ಆಸ್ಪತ್ರೆ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಶ್ರೀನಿವಾಸ ಮೆಡಿಕಲ್ ಕಾಲೇಜಿನ ಡೀನ್ ಡಾ. ಉದಯಕುಮಾರ್ ಮತ್ತಿತರರು ಇದ್ದರು.

Comments are closed.