
ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇಯಿಂದ ಜಾರಿದೆ. ಈ ವೇಳೆ ಓರ್ವ ಪೈಲೆಟ್ ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.



ಸಂಜೆ 7:45 ಕ್ಕೆ ಈ ಘಟನೆ ನಡೆದಿದ್ದು, 174 ಪ್ರಯಾಣಿಕರಿದ್ದು, 6 ಮಂದಿ ಸಿಬ್ಬಂದಿಗಳಿದ್ದರು. ವಿಮಾನ ರನ್ ವೇ ಯಿಂದ ಕಣಿವೆಗೆ ಜಾರಿದ ಪರಿಣಾಮ ಇಬ್ಭಾಗವಾಗಿದೆ. 45 ಮಂದಿ ಗಂಭೀರ ಗಾಯಗೊಂಡಿದ್ದು, ಓರ್ವ ಪೈಲೆಟ್ ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ.
ಮಂಗಳೂರಿನಲ್ಲಿ ನಡೆದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪತನದ ಮಾದರಿಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಡಿಜಿಸಿಎ ಹೇಳಿಕೆ…
ಅಪಘಾತದ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಅಧಿಕೃತ ಹೇಳಿಕೆ ನೀಡಿದ್ದು, AXB1344, B737 ವಿಮಾನ ಕೋಳಿಕ್ಕೋಡ್ ಬಳಿಯ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದ್ದು, ರನ್ವೇಯಿಂದ ಜಾರಿ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ವಿಮಾನ ಎರಡು ಹೋಳಾಗಿದ್ದು, ಭಾರೀ ಮಳೆಯ ಕಾರಣಕ್ಕೆ ಪೈಲಟ್ ಲ್ಯಂಡಿಂಗ್ ಮಾಡುವಲ್ಲಿ ವಿಫಲವಾಗಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಪಷ್ಟಪಡಿಸಿದೆ.
Comments are closed.