ಕರ್ನಾಟಕ

ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಕೊರೋನಾ ಸೋಂಕು

Pinterest LinkedIn Tumblr


ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊರೋನಾ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆನ್ನಲ್ಲೇ ಅವರ ಮಗ ಹಾಗೂ ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಈ ಬಗ್ಗೆ ಸ್ವತಃ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರೇ ಟ್ವಿಟರ್​ನಲ್ಲಿ ಖಚಿತಪಡಿಸಿದ್ದಾರೆ. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸುವಂತೆ ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟು, ಇದೀಗ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಮಗ ಹಾಗೂ ವರುಣಾ ಕ್ಷೇತ್ರದ ಶಾಸಕರಾಗಿರುವ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.ಇದನ್ನು ಓದಿ: ಕೇರಳದ ಇಡುಕ್ಕಿಯಲ್ಲಿ ಭೂ ಕುಸಿತದಿಂದ 15 ಮಂದಿ ಸಾವು; 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ಇತ್ತೀಚಿನ ದಿನಗಳಲ್ಲಿ ಜನಪ್ರತಿನಿಧಿಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಸಿಎಂ ಬಿಎಸ್ ಯಡಿಯೂರಪ್ಪ ಅವರಗೂ ಸೋಂಕು ತಗುಲಿದ್ದು, ಅವರೂ ಸಹ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.