
ಮಂಗಳೂರು, ಆಗಸ್ಟ್.14: ನಗರದಲ್ಲಿ ನಗರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಅಂಥವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ವಿಕಾಸ್ ಕುಮಾರ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಧಾರ್ಮಿಕ ಅವಹೇಳನ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಯಾವುದೇ ವಿಚಾರಗಳ ಕುರಿತು ಪೋಸ್ಟ್, ಶೇರ್ ಹಾಗೂ ಕಮೆಂಟ್ ಮಾಡುವುದು ಕಂಡುಬಂದರೆ ಅಂತಹ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವಿಚಾರಗಳಿಗೆ ಸಂಬಂಧಪಟ್ಟಂತೆ ಯಾವುದೇ ವ್ಯಕ್ತಿ ಅವಹೇಳನ ಮಾಡುವ ವಿಚಾರಗಳನ್ನು ಸೃಷ್ಟಿಸುವುದು, ಹಂಚಿಕೊಳ್ಳುವುದು, ಅಭಿಪ್ರಾಯ ವ್ಯಕ್ತಪಡಿಸುವುದು, ಟೀಕೆ ನಡೆಸುವುದು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Comments are closed.