ಕರಾವಳಿ

ನಾಳೆ ಸ್ವಾತಂತ್ರ್ಯೋತ್ಸವ ಆಚರಣೆ : ದ.ಕ. ಜಿಲ್ಲಾಧಿಕಾರಿಗಳಿಂದ ಸಿದ್ದತೆ ಪರಿಶೀಲನೆ

Pinterest LinkedIn Tumblr

ಮಂಗಳೂರು ಆಗಸ್ಟ್ 14 : ಮಂಗಳೂರು ನೆಹರೂ ಮೈದಾನದಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಶನಿವಾರ ಬೆಳಿಗ್ಗೆ 8.30ರಿಂದ ಆರಂಭಗೊಳ್ಳಲಿದೆ.

ನಾಳೆ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆ ಸಿದ್ಧತೆಗಳನ್ನು ಶುಕ್ರವಾರ ನೆಹರೂ ಮೈದಾನದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಪರಿಶೀಲಿಸಿದರು. ಮಹಾನಗರಪಾಲಿಕೆ ಆಯುಕ್ತ ದಿನೇಶ್ ಕುಮಾರ್, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಉಸ್ತುವಾರಿ ಸಚಿವರಿಂದ ಧ್ವಜಾರೋಹಣ -ಸ್ವಾತಂತ್ರ್ಯೋತ್ಸವ ಸಂದೇಶ :

ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಗಸ್ಟ್ 15 ರಂದು ಬೆಳಿಗ್ಗೆ 8.30ಕ್ಕೆ ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ.

ಬೆಳಿಗ್ಗೆ 8.45 ಗಂಟೆಗೆ ಸಮಾವೇಶ, 8.55 ಗಂಟೆಗೆ ಗಣ್ಯರ ಆಗಮನ, 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ ರಾಷ್ಟ್ರ ಗೀತೆ(ಪೊಲೀಸ್ ಬ್ಯಾಂಡಿನಲ್ಲಿ), 9.05 ಗಂಟೆಗೆ ಸಚಿವರಿಂದ ಪೆರೇಡ್ ವೀಕ್ಷಣೆ, ಗೌರವ ಸ್ವೀಕಾರ, ನಾಡಗೀತೆ, 9.15 ಗಂಟೆಗೆ ಕೋವಿಡ್-19 ವಾರಿಯರ್ಸ್‍ಗಳಿಗೆ ಸನ್ಮಾನ ಕಾರ್ಯಕ್ರಮ, 9.20 ಗಂಟೆಗೆ ಸಚಿವರು ಸ್ವಾತಂತ್ರ್ಯೋತ್ಸವ ಕುರಿತು ಸಂದೇಶ ನೀಡಲಿದ್ದಾರೆ. 10 ಗಂಟೆಗೆ ಪಥ ಸಂಚಲನ ಹಾಗೂ ಪೆರೇಡ್ ವಿಸರ್ಜನೆ ನಡೆಯಲಿದೆ.

ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಹಾಜರಾಗುವವರು ಕಡ್ಡಾಯವಾಗಿ ಮುಖಗವಸು(ಮಾಸ್ಕ್) ಧರಿಸಬೇಕು ಹಾಗೂ ಸಾಮಾಜಿಕ ಅಂತರ ಪಾಲಿಸಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ತಿಳಿಸಿದೆ.

ಸ್ವಾತಂತ್ರ್ಯೋತ್ಸವ ನೇರ ಪ್ರಸಾರ :

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಸ್ವಾತಂತ್ರ್ಯ ಕಾರ್ಯಕ್ರಮಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧವಿದ್ದು, ಈ ಪ್ರಯುಕ್ತ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ನೇರ ಪ್ರಸಾರ ಆಯೋಜಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Comments are closed.