ಕರ್ನಾಟಕ

ಎಸ್​.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

Pinterest LinkedIn Tumblr

ಕರೊನಾ ಸೋಂಕಿಗೆ ಒಳಗಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್​. ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಇಂದು ಮತ್ತಷ್ಟು ಚೇತರಿಕೆ ಕಂಡುಬಂದಿದೆ.

ಬಾಲಸುಬ್ರಹ್ಮಣ್ಯಂ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ನಿನ್ನೆ ಹೇಳಲಾಗಿತ್ತು. ಇಂದು ಮತ್ತೂ ಸ್ವಲ್ಪ ಚೇತರಿಸಿಕೊಂಡಿದ್ದು, ಅವರಲ್ಲಿ ಚಲನೆ ಕಂಡುಬರುತ್ತಿದೆ. ಹಾಗೇ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಗುರುತಿಸುತ್ತಿದ್ದಾರೆ ಎಂದು ಅವರ ಪುತ್ರ ಎಸ್​.ಪಿ. ಚರಣ್​ ತಿಳಿಸಿದ್ದಾರೆ.

ಇಂದು ತಮ್ಮ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿ, ಇನ್ನೊಂದು ವಿಡಿಯೋ ಅಪ್ಲೋಡ್​ ಮಾಡಿರುವ ಚರಣ್​ ಅವರು, ಎಸ್​ಪಿಬಿ ಶೀಘ್ರವೇ ಗುಣಮುಖರಾಗುತ್ತಾರೆ ಎಂಬ ಭರವಸೆಯನ್ನು ವೈದ್ಯರು ನೀಡಿದ್ದಾರೆ. ಹಾಗೇ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಮತ್ತೊಮ್ಮೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗುವುದಿಲ್ಲ ಎಂದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕದ್ದುಮುಚ್ಚಿ ಭಾರತದ ಭೂಪ್ರದೇಶಕ್ಕೆ ಬಂದ ಪಾಕ್​ ಮೀನುಗಾರರು ಬಿಎಸ್​ಎಫ್​ ಯೋಧರನ್ನು ನೋಡಿ ನೀರಿಗೆ ಹಾರಿದರು

ನನ್ನ ಅಪ್ಪನನ್ನು ಐಸಿಯುದಿಂದ ಎಕ್ಸ್ಲ್ಯೂಸಿವ್​ ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರಲ್ಲಿ ಚಲನೆ ಕಂಡುಬರುತ್ತಿದೆ ಎಂಬುದೇ ಸಮಾಧಾನ. ಇನ್ನೂ ವೆಂಟಿಲೇಟರ್​​ ಸಹಾಯದಲ್ಲೇ ಇದ್ದಾರೆ. ಕಳೆದ ಕೆಲವು ದಿನಗಳಿಂದ ಉಸಿರಾಟಕ್ಕೆ ತೀವ್ರ ಕಷ್ಟಪಡುತ್ತಿದ್ದರು. ಆದರೆ ಈಗ ಸ್ವಲ್ಪ ಆರಾಮಾಗಿ ಉಸಿರಾಡುತ್ತಿದ್ದಾರೆ ಎಂದೂ ಚರಣ್​ ಮಾಹಿತಿ ನೀಡಿದ್ದಾರೆ.

ವೈದ್ಯಕೀಯ ಸಿಬ್ಬಂದಿ ಅವರ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಈಗ ನನ್ನ ತಂದೆ ಸಂಪೂರ್ಣ ನಿದ್ರಾವಸ್ಥೆಯಲ್ಲಿಲ್ಲ. ಆರೋಗ್ಯ ಸುಧಾರಿಸುತ್ತಿದೆ. ಹಾಗೇ ಹಲವರು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ಎಲ್ಲರಿಗೂ ಕೃತಜ್ಞತೆಗಳು ಎಂದು ಹೇಳಿದ್ದಾರೆ.

Comments are closed.