
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿ ಮತ್ತಿಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಎಂಬ ಪ್ರದೇಶದಕ್ಕೆ ಬಂದಿರುವ ಉಗ್ರರು ಈ ವೇಳೆ ಗಸ್ತು ತಿರುಗುತ್ತಿದ್ದ ಸಿಆರ್’ಪಿಎಫ್ ಪಡೆಯ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಉಗ್ರರು ನಡೆಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಅಲ್ಲದೆ, ಮತ್ತಿಬ್ಬರು ಸಿಆರ್’ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದಿರುವ ಭದ್ರತಾಪಡೆಗಳು ಉಗ್ರರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
Comments are closed.