ಕುಂದಾಪುರ: ಕಾಲೇಜು ಎದುರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಾವುಂದದಲ್ಲಿ ನಡೆದಿದೆ. ಮರವಂತೆ ನಿವಾಸಿ ಕಿಶನ್ ಖಾರ್ವಿ (17) ಮೃತ ಪಟ್ಟ ದುರ್ದೈವಿ.

ಪ್ರಥಮ ಪಿಯುಸಿ ಮುಗಿಸಿರುವ ಕಿಶನ್ ಖಾರ್ವಿ ದ್ವಿತೀಯ ಪಿಯುಸಿಗೆ ಪ್ರವೇಶ ದಾಖಲಾತಿ ಹಿನ್ನೆಲೆಯಲ್ಲಿ ಕಾಲೇಜಿಗೆ ಬಂದು ಕಾಲೇಜಿನಿಂದ ಮರಳುವ ವೇಳೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಿಶನ್ ಖಾರ್ವಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.
ಸ್ಥಳಕ್ಕೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ ನಾಯಕ್, ಪಿಎಸ್ಐ ಸಂಗೀತಾ ಭೇಟಿ ನೀಡಿದ್ದಾರೆ. ಗಂಗೊಳ್ಳಿ ಆಪತ್ಬಾಂದವ ಅಂಬುಲೆನ್ಸ್ ಮೂಲಕ ಶವವನ್ನು ಬೈಂದೂರು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.