ಕರ್ನಾಟಕ

ಜಮೀರ್ ಅಹ್ಮದ್ ಖಾನ್‌-ವಿ. ಶ್ರೀನಿವಾಸ ಪ್ರಸಾದ್‌ಗೆ ಕೊರೊನಾ ಸೋಂಕು ದೃಢ

Pinterest LinkedIn Tumblr

ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗು ಸಂಸದ ವಿ. ಶ್ರೀನಿವಾಸ ಪ್ರಸಾದ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮೂಲಕ ಸ್ವತಃ ಮಾಹಿತಿ ನೀಡಿರುವ ಅವರು , ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಮೈಸೂರು: ಹಿರಿಯ ರಾಜಕಾರಣಿ ಹಾಗೂ ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಖುದ್ದು ಶ್ರೀನಿವಾಸ‌ ಪ್ರಸಾದ್‌ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಖಚಿತಪಡಿಸಿದ್ದಾರೆ.

ಕಳೆದೊಂದು ವಾರದಿಂದ ರೋಗ ಲಕ್ಷಣಗಳು ಅವರಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಶ್ರೀನಿವಾಸ ಪ್ರಸಾದ್ ಅವರು ಸೋಮವಾರ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕೊರೊನಾ ಪರೀಕ್ಷೆಯ ವರದಿ ಬರುತ್ತಿದ್ದಂತೆಯೇ, ಪ್ರಸಾದ್ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

ಈ ನಡುವೆ ಪ್ರಸಾದ್ ಅವರ ಕುಟುಂಬ ಸದಸ್ಯರ ಕೊರೊನಾ ಪರೀಕ್ಷೆಯ ವರದಿ ನೆಗೆಟಿವ್ ಬಂದಿದ್ದು, ಅವರು ಹೋ ಕ್ವಾರೆಂಟೈನ್‌ನಲ್ಲಿದ್ದಾರೆ. ಇತ್ತ ಪ್ರಸಾದ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಇದೀಗ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಬಿಜೆಪಿ ನಾಯಕರು, ಕಾರ್ಯಕರ್ತರಲ್ಲಿ ಕೊರೊನಾ ಆತಂಕ ಶುರುವಾಗಿದೆ.

ಸೋಮವಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ಎಂಎಲ್‌ಸಿ ವಿಶ್ವನಾಥ್, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಹಾಸನ ಶಾಸಕ ಪ್ರೀತಂ ಗೌಡ, ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಅಲ್ಲದೇ ಅನೇಕ ಬಿಜೆಪಿ ಕಾರ್ಯಕರ್ತರು ಸಹ ಇದ್ದರು. ಇದೀಗ ಇವರೆಲ್ಲರಲ್ಲೂ ಕೊರೊನಾ ಆತಂಕ ಶುರುವಾಗಿದೆ.

Comments are closed.