
ನವದೆಹಲಿ (ಆ.18): ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದರು. ಈಗ ಅವರಿಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ ವೇಳೆಗೆ ಅಮಿತ್ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 2ರಂದು ಅಮಿತ್ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವೇಳೆ ಟ್ವೀಟ್ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.
ಆಗಸ್ಟ್ 14ರಂದು ಕೊರೋನಾ ಸೋಂಕಿನಿಂದ ಮುಕ್ತರಾಗಿದ್ದ ಅವರು ಮನೆಗೆ ತೆರಳಿದ್ದರು. ಈಗ ಅವರಿಗೆ ಮತ್ತೆ ಉಸಿರಾಟದ ತೊಂದರೆ ಹಾಗೂ ಮೈಕೈ ನೋವು ಕಾಣಿಸಿಕೊಂಡಿರುವುದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
Comments are closed.