ಕರಾವಳಿ

ದ.ಕ.ಜಿಲ್ಲಾ ಕಾನೂನು ಸೇವಾ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Pinterest LinkedIn Tumblr

ಮಂಗಳೂರು: ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಗೆ ಒಂದು ಆಡಳಿತ ಸಹಾಯಕ/ಗುಮಾಸ್ತ ವ ಬೆರಳಚ್ಚುಗಾರ ಮತ್ತು ಒಂದು ದಲಾಯತ್ ಹುದ್ದೆಗೆ ತಾತ್ಕಾಲಿಕವಾಗಿ ಮತ್ತು ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಆಯ್ಕೆಯಾದ ವ್ಯಕ್ತಿಗಳನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ಮಾಸಿಕ ಸಂಭಾವನೆ ರೂ.14,866 ಮತ್ತು ರೂ.11,387 ಆಗಿದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳಲ್ಲಿ ನಿವೃತ್ತ ಸರಕಾರಿ ನೌಕರರು ಸೂಕ್ತ ವ್ಯಕ್ತಿಗಳು ಎಂದು ಕಂಡು ಬಂದಲ್ಲಿ ಅವರನ್ನು ಪ್ರಾಶಸ್ತ್ಯದ ಮೇರೆಗೆ ನೇಮಕಾತಿಗೆ ಪರಿಗಣಿಸಲಾಗುತ್ತದೆ. ಎರಡೂ ಹುದ್ದೆಗಳಿಗೆ ಸಂಬಧಿಸಿದಂತೆ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಾಗೂ ಕಂಪ್ಯೂಟರ್ ಬಳಕೆಯ ತಿಳುವಳಿಕೆ ಹೊಂದಿದ ಅಭ್ಯರ್ಥಿಗಳಿಗೆ ಆಧ್ಯತೆಯನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ಆಗಸ್ಟ್ 25 ಕೊನೆಯ ದಿನವಾಗಿರುತ್ತದೆ.

ಆಸಕ್ತರು ತಮ್ಮ ಹೆಸರು, ವಿಳಾಸ, ವಿದ್ಯಾರ್ಹತೆ, ಇಮೇಲ್, ಮೊಬೈಲ್ ಇತ್ಯಾದಿ ವಿವರಗಳನ್ನು ಹೊಂದಿರುವ ಅರ್ಜಿಯನ್ನು ಪೂರಕ ದಾಖಲೆಗಳ ಪ್ರತಿಗಳೊಂದಿಗೆ ನೋಂದಾಯಿತ ಅಂಚೆ ಮೂಲಕ ಕೊನೆಯ ದಿನಾಂಕದ ಒಳಗಾಗಿ ಸದಸ್ಯ ಕಾರ್ಯದರ್ಶಿಗಳು, ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಮಂಗಳೂರು -575003 ಅಥವಾ ಪ್ರಾಧಿಕಾರದ ಇ-ಮೇಲ್ – dlsamangalore@gmail.com ಗೆ ಇ-ಮೇಲ್ ಮೂಲಕವೂ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಸಲ್ಲಿಬಹುದು.

ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿಗಳು, ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಮಂಗಳೂರು ಕಚೇರಿಯನ್ನು ಸಂಪರ್ಕಿಸುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.

Comments are closed.