
ಮಂಗಳೂರು : ತುಂಬೆ ಅಣೆಕಟ್ಟು ಆಸುಪಾಸಿನ ತಡೆಗೋಡೆ ಕುಸಿದ ಪ್ರದೇಶಕ್ಕೆ ಮಂಗಳೂರು ಮಹಾನಗರ ಪಾಲಿಕೆ ಅಯುಕ್ತರು ಹಾಗೂ ಮೇಯರ್ ಮ.ನ.ಪಾ ಅಧಿಕಾರಿಗಳ ತಂಡ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸತತ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾಗಿ ತುಂಬೆ ಅಣೆಕಟ್ಟು ಆಸುಪಾಸಿನ ತಡೆಗೋಡೆ ಕುಸಿದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪಾಲಿಕೆ ಅಯುಕ್ತರು ಹಾಗೂ ಮೇಯರ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ತಡೆಗೋಡೆಯ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಅಯುಕ್ತರು ಮತ್ತೆ ಮಳೆಯಾದಲ್ಲಿ ತಡೆಗೋಡೆ ಕೊರೆಯದಂತೆ ಮುಂಜಾಗ್ರತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ತುಂಬೆ ಡ್ಯಾಮ್ ಕಚೇರಿಗೆ ಆಯುಕ್ತರು ಹಾಗೂ ಮೇಯರ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿನ ಕುಂದು ಕೊರತೆಗಳ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
Comments are closed.