ಕರ್ನಾಟಕ

ನಂಜನಗೂಡು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣ; ಜಿಲ್ಲಾ ಪಂಚಾಯತ್ ಸಿಇಒ ಮಿಶ್ರಾ ಮೇಲೆ ಎಫ್​ಐಆರ್

Pinterest LinkedIn Tumblr

ಮೈಸೂರು: ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಮಿಶ್ರಾ ಮೇಲೆ ಎಫ್​ಐಆರ್ ದಾಖಲಾಗಿದೆ.

ಮೃತ ವೈದ್ಯಾಧಿಕಾರಿಯ ತಂದೆ ನೀಡಿದ ದೂರಿನ ಮೇರೆಗೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ಮಗನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರೆಂದು ಡಾ. ನಾಗೇಂದ್ರ ತಂದೆ ರಾಮಕೃಷ್ಣ ದೂರಿದ್ದರು.

ಜಿಲ್ಲಾ ಪಂಚಾಯತ್​ನ ಮುಖ್ಯ ನಿರ್ವಹಣಾಧಿಕಾರಿಯವರು ನನ್ನ ಮಗನ ಮೇಲೆ ಒತ್ತಡ ಹೇರುತ್ತಿದ್ದರು. ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಹೆದರಿಸುತ್ತಿದ್ದರು ಎಂದು ರಾಮಕೃಷ್ಣ ತಮ್ಮ ದೂರಿನಲ್ಲಿ ಪ್ರಸ್ತಾಪಿಸಿದ್ದರು. ಇದೀಗ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಜಿ.ಪಂ. ಸಿಇಒ ಪ್ರಶಾಂತ್ ಮಿಶ್ರಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Comments are closed.