ಕರ್ನಾಟಕ

ಬಿಜೆಪಿ ಶಾಸಕ ಅಭಯ್ ಪಾಟೀಲ್ ಗೆ ಕೊರೊನಾ

Pinterest LinkedIn Tumblr


ಬೆಳಗಾವಿ: ಮಾರಕ ಕೊರೋನಾ ವೈರಸ್ ಸೋಂಕಿಗೆ ಕರ್ನಾಟಕದ ಮತ್ತೋರ್ವ ಶಾಸಕ ತುತ್ತಾಗಿದ್ದು, ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಬೆಳಗಾವಿಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ಶುಕ್ರವಾರ ಕೋವಿಡ್-19 ದೃಢಪಟ್ಟಿದ್ದು, ಪ್ರಸ್ತುತ ಅವರು ತಮ್ಮ ಸ್ವಗೃಹದಲ್ಲಿಯೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಅಭಯ್ ಪಾಟೀಲ್ ಅವರ ಸಹೋದರ ಸಂತೋಷ ಪಾಟೀಲ್ ಅವರು, ತಮ್ಮ ಸಹೋದರ ಅಭಯ್ ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರು ಹೋಂ ಐಸೊಲೇಷ‌ನಲ್ಲಿದ್ದಾರೆ. ಕುಟುಂಬದವರ ಪರೀಕ್ಷಾ ವರದಿ ಬರುವುದು ಬಾಕಿ ಇದೆ ಎಂದು ಹೇಳಿದ್ದಾರೆ.

ಇನ್ನು ಶಾಸಕ ಅಭಯ್ ಪಾಟೀಲ್ ಅವರು ಆ.25ರಂದು ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಿಗೂ ಸೋಂಕು ಭೀತಿ ಆರಂಭವಾಗಿದೆ.

Comments are closed.