
ಮಂಗಳೂರು : ಮುಂದಿನ ದಿನಗಳಲ್ಲಿ ಯಾವುದೇ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡ ಬೇಕಿದ್ದರೆ, ಎಪಿಎಂಸಿ ಪರವಾನಿಗೆ ಪಡೆದ ನಂತರವೇ ಮಹಾನಗರಪಾಲಿಕೆ ಅಥವಾ ಸ್ಥಳೀಯ ಸಂಸ್ಥೆಗಳು ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಕೆಲವು ವ್ಯಾಪಾರಿಗಳು ರಿಟೇಲ್ ವ್ಯಾಪಾರಕ್ಕೆ ಪರವಾನಿಗೆ ಪಡೆದು, ಹೋಲ್‍ಸೇಲ್ ವ್ಯವಹಾರ ಮಾಡುತ್ತಿರುವ ಮಾಹಿತಿ ಇದ್ದು, ಅಂತಹ ವ್ಯಾಪಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಮಂಗಳೂರು ನಗರದಲ್ಲಿ ಇಂತಹ ವ್ಯಾಪಾರ ಮಾಡುತ್ತಿರುವವರನ್ನು ಮಹಾನಗರಪಾಲಿಕೆ ಅಧಿಕಾರಿಗಳು ಪತ್ತೆ ಹಚ್ಚಬೇಕು. ಇದಕ್ಕಾಗಿ ವಿಚಕ್ಷಣಾ ತಂಡವನ್ನು ರಚಿಸುವಂತೆ ಅವರು ಮಹಾನಗರಪಾಲಿಕೆ ಆಯುಕ್ತರಿಗೆ ನಿರ್ದೇಶಿಸಿದ್ದಾರೆ.
ಇದೇ ವೇಳೆ ಎಪಿಎಂಸಿ ಪ್ರಾಂಗಣದಲ್ಲಿ 10 ವರ್ಷಗಳ ಕಾಲ ನಿಯಮಾನುಸಾರ ವ್ಯಾಪಾರ ಮಾಡಿದವರಿಗೆ ಮಳಿಗೆಗಳನ್ನು ಮಾಲೀಕತ್ವದಲ್ಲಿ ನೀಡಲಾಗುವುದು. ವರ್ತಕರ ಎಲ್ಲಾ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸಲಾಗುವುದು ಎಂದು ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ತಿಳಿಸಿದ್ದಾರೆ.
Comments are closed.