ರಾಷ್ಟ್ರೀಯ

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಇನ್ನಿಲ್ಲ!

Pinterest LinkedIn Tumblr

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿದ್ಧಾರೆ. ಭಾರತರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್‌ ದಾ, ಕೊರೊನಾ ವೈರಸ್ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೋಮಾಗೆ ಜಾರಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ಅಭಿಜೀತ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ.

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ 84 ವರ್ಷದ ಪ್ರಣಬ್ ಮುಖರ್ಜಿ ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ (ಆರ್ ಅಂಡ್ ಆರ್) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲದೆ, ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ (Blood clot) ಸಮಸ್ಯೆ ಉದ್ಭವವಾಗಿತ್ತು. ಹೀಗಾಗಿ ಪ್ರಣಬ್ ಅವರಿಗೆ ತುರ್ತಾಗಿ ಮಿದುಳು ಚಿಕಿತ್ಸೆಯನ್ನು ಮಾಡಲಾಗಿತ್ತು.

ಆದರೆ, ಮಿದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೋನಾ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿತ್ತು. ಆದರೂ ಮಿದುಳು ಶಸ್ತ್ರ ಚಿಕಿತ್ಸೆಯನ್ನು ಮುಗಿಸಿ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್ ಸಪೋರ್ಟ್) ಮಾಡುವ ಮೂಲಕ ತೀವ್ರ ನಿಗಾ ವಹಿಸಲಾಗಿತ್ತು. ಈ ವೇಳೆ ಅವರು ಶಾಶ್ವತ ಕೋಮಾಕ್ಕೆ ಜಾರಿದ್ದರು.

ಆದರೆ, ಎಷ್ಟೇ ಪ್ರಯತ್ನ ನಡೆಸಿದರು ಪ್ರಣಬ್‌ ಮುಖರ್ಜಿ ಚಿಕಿತ್ಸೆೆಗೆ ಸ್ಪಂದಿಸಿಲ್ಲ. ಹೀಗಾಗಿ ಸಂಜೆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Comments are closed.