ಕರ್ನಾಟಕ

ಡ್ರಗ್ಸ್ ಜಾಲದಲ್ಲಿದ್ದು ಸಿಸಿಬಿ ‘ಪಂಜರ’ಕ್ಕೆ ಬಿದ್ದ ತುಪ್ಪದ ಬೆಡಗಿ ರಾ’ಗಿಣಿ’..!

Pinterest LinkedIn Tumblr

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಇಂದು ಬೆಳಗ್ಗೆ ನಟಿ ರಾಗಿಣಿಯನ್ನು ವಿಚಾರಣೆಗೆ ಕರೆತಂದಿದ್ದ ಸಿಸಿಬಿ ಅಧಿಕಾರಿಗಳು, ಸುಮಾರು ಏಳು ಗಂಟೆಗಳ ಸತತ ವಿಚಾರಣೆ ಬಳಿಕ ನಟಿಯನ್ನು ವಶಕ್ಕೆ ಪಡೆದಿದ್ದಾರೆ.

ಡ್ರಗ್ಸ್ ಸೇವನೆ ಮತ್ತು ಪೆಡ್ಲರ್ ಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ರಾಗಿಣಿಯನ್ನು ಸಿಸಿಬಿ ವಶಕ್ಕೆ ಪಡೆದಿದೆ.

ನಟಿ ರಾಗಿಣಿ ಆಪ್ತ ರವಿಶಂಕರ್ ವಶಕ್ಕೆ ಪಡೆದ ಬಳಿಕ ನಟಿ ರಾಗಿಣಿ ವಾಟ್ಸಪ್ ಚಾಟ್ ಡಿಲೀಟ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.ವಾಟ್ಸಪ್ ಅಪ್ ಡಿಲೀಟ್ ಮಾಡಿ ಹೊಸ ಮೊಬೈಲ್ ಖರೀದಿಸಿ ವಾಟ್ಸಾಪ್ ಇನ್ ಸ್ಟಾಲ್ ಮಾಡಿಕೊಂಡಿದ್ದಾರೆ. ವಾಟ್ಸಪ್ ಚಾಟ್ ಸಿಗದ್ದಂತೆ ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಸರ್ಚ್ ವಾರೆಂಟ್ ಪಡೆದ ಸಿಸಿಬಿ ಅಧಿಕಾರಿಗಳು ರಾಗಿಣಿ ಮನೆ ಮೇಲೆ ದಾಳಿ‌ನಡೆಸಿ ಹಲವು ಗಂಟೆ ವಿಚಾರಣೆ ನಡೆಸಿ ಬಳಿಕ ವಶಕ್ಕೆ ಪಡೆದಿದ್ದರು.

Comments are closed.