ಉಡುಪಿ: ಜಿಲ್ಲೆಯಾದ್ಯಂತ ಗುರುವಾರ ಮುಂಜಾನೆಯಿಂದ ಧಾರಾಕಾರ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರು ಕರಾವಳಿ ಜಿಲ್ಲೆಗಳಾದ ಉಡುಪಿ ಜಿಲ್ಲೆಯಲ್ಲಿ 5 ದಿನಗಳ ಕಾಲ ಭಾರೀ ಮಳೆಯಾಗುವ ಸೂಚನೆ ನೀಡಿದೆ.

ಗುರುವಾರ ಮಧ್ಯಾಹ್ನದ ವರದಿಯಂತೆ ಮುಂದಿನ ಎರಡು ದಿನ (ಸೆ.11 ಸೆ.12) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆ.13 ರಿಂದ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿನ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ಕೊಡಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮ ವಹಿಸಬೇಕಿರುವುದರಿಂದ ಸಾರ್ವಜನಿಕರಿಗೆ ಈ ಸೂಚನೆ ನೀಡಲಾಗಿದೆ.
* ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿಬಾಯಿಸಲು ತಯಾರಿ ಮಾಡಿಕೊಳ್ಳಬೇಕು.
* ಸಾರ್ವಜನಿಕರು ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
* ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಮತ್ತು ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಕ್ಕೆ ತಲುಪಬೇಕೆಂದು ಸೂಚಿಸಲಾಗಿದೆ.
Comments are closed.