ಕರ್ನಾಟಕ

ಸೆ.21 ರಿಂದ ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭಕ್ಕೆ ಸರಕಾರ ನಿರ್ಧಾರ..!

Pinterest LinkedIn Tumblr

ಬೆಂಗಳೂರು: ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, 9-12 ನೇ ತರಗತಿ ಪ್ರಾರಂಭ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಕೇಂದ್ರ ಸರ್ಕಾರದ ಅನುಮತಿ ಮೇಲೆ ಶಾಲಾ-ಕಾಲೇಜು ಪ್ರಾರಂಭಕ್ಕೆ ಇಲಾಖೆ ನಿರ್ಧಾರ ಮಾಡಿದ್ದು, ಆರೋಗ್ಯ ಇಲಾಖೆ ಶಾಲಾ-ಕಾಲೇಜುಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. 2-3 ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಿ ಶಾಲೆಗಳ ಪ್ರಾರಂಭ ಮಾಡಲು ಇಲಾಖೆ ತೀರ್ಮಾನ ಮಾಡಿದೆ.

ಸೆಪ್ಟೆಂಬರ್ 21 ರಿಂದ ಕೇವಲ 9-12 ನೇ ತರಗತಿಗಳು ಮಾತ್ರ ಪ್ರಾರಂಭ ಆಗಲಿದೆ. ಬಳಿಕ ಹಂತ ಹಂತವಾಗಿ ಉಳಿದ ತರಗತಿಗಳು ಪ್ರಾರಂಭಕ್ಕೆ ಚಿಂತನೆ ನಡೆಸಲಾಗಿದೆ.

 

 

 

 

 

Comments are closed.